ಬೆಂಗಳೂರು: ಇಂದು ಕರ್ನಾಟಕ ರಾಜ್ಯದಲ್ಲಿ 10ನೆಯ ತರಗತಿ ಫಲಿತಾಂಶ ಪ್ರಕಟವಾಗಲಿದ್ದು ಎಲ್ಲಾ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಶಿಕ್ಷಣ ಸಚಿವರಾಗಿರುವಂತಹ ಮಧು ಬಂಗಾರಪ್ಪ ರವರು ಇಂದು (ಶುಕ್ರವಾರ ಮೇ 02) ರಂದು 11:30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಗೊಳಿಸಲಿದ್ದಾರೆ. ನಂತರ ವಿದ್ಯಾರ್ಥಿಗಳು ಮದ್ಯಾಹ್ನ 12:30 ರಿಂದ ಆನ್ಲೈನ್ ನಲ್ಲಿ ತಮ್ಮ ಫಲಿತಾಂಶವನ್ನು ತಿಳಿದುಕೊಳ್ಳಬಹುದು ಎಂದು ತಿಳಿಸಲಾಗಿದೆ.
karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದೇ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆದಿತ್ತು. ಮಾ.21ರಿಂದ ಏ.4 ರ ವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
