ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರು ಖಾಸಗಿ ಕಾರ್ಯಕ್ರಮ ಒಂದರಲ್ಲಿ ಕನ್ನಡದ ಬಗ್ಗೆ ಕೀಳಾಗಿ ಮಾತಾಡಿ, ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಹೌದು, ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್ ಅವರು ಕನ್ನಡದ ಹಾಗೂ ಪಹಲ್ಗಾಮ್ ದಾಳಿಗೂ ಸಂಬಂಧವಿದೆ ಎನ್ನುವಂತೆ ಹೇಳುವ ಮೂಲಕ ಇದೀಗ ಕರ್ನಾಟಕದ ಜನತೆಯ ಕೋಪಕ್ಕೆ ಗುರಿಯಾದಂತಿದೆ.
ಕನ್ನಡ ಭಾಷೆ ಹಾಗೂ ಕನ್ನಡ ಹಾಡುಗಳ ಬಗ್ಗೆ ಪ್ರೀತಿಯಿಂದ ಮಾತನಾಡುತ್ತಲೇ ಸೋನು ನಿಗಮ್ ವಿವಾದತ್ಮಾಕ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಾಜಧಾನಿಯಲ್ಲಿ ಭಾರೀ ಮಳೆ
ಕನ್ನಡ ಹಾಡು ಹಾಡುವಂತೆ ಸೋನು ನಿಗಮ್ ಗೆ ಅಭಿಮಾನಿಗಳು ಮನವಿ ಮಾಡಿದರು. ಈ ವೇಳೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಮಾತಾಡುವ ಭರದಲ್ಲಿ ಪಹಲ್ಗಾಮ್ ದಾಳಿ ಹಾಗೂ ಕರ್ನಾಟಕದ ಬಗ್ಗೆ ಮಾತಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಸೋನು ನಿಗಮ್ ನೀಡಿರುವ ಹೇಳಿಕೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ, ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಅವರನ್ನು ಖಳನಾಯಕರನ್ನಾಗಿ ಮಾಡುವ ಹುನ್ನಾರ ಹೊಂದಿದೆ. ಹೀಗಾಗಿ ಅವನ ಮೇಲೆ ಈ ಕೂಡಲೇ ದೂರು ದಾಖಲಾಗಬೇಕೆಂದು ಒತ್ತಾಯಿಸಿದ್ದಾರೆ.
