ಚಿತ್ರದುರ್ಗ: ಈ ಬಾರಿ ಐಪಿಎಲ್ ಪಂದ್ಯಾವಳಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊನ್ನೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ರಣರೋಚಕವಾಗಿ ಈ ಪಂದ್ಯದಲ್ಲಿ ಕೇವಲ ಎರಡು ರನ್ ಗಳ ಮೂಲಕ ಆರ್ಸಿಬಿಯು ಗೆದ್ದು ಬೀಗಿದೆ.
ಇನ್ನು ಆರ್ಸಿಬಿ ಗೆದ್ದಿರುವ ಕಾರಣಕ್ಕೆ ಅಭಿಮಾನಿಗಳು ವಿಧ ವಿಧಗಳಲ್ಲಿ ಸೆಲೆಬ್ರೇಶನ್ ಮಾಡುವುದರ ಜೊತೆಗೆ ಆರ್ಸಿಬಿ ಅಭಿಮಾನಿಗಳು ಒಂದು ದೊಡ್ಡ ಯಡವಟ್ಟು ಮಾಡಿಕೊಂಡಿದೆ.
ಹೌದು, ಆರ್ಸಿಬಿ ಗೆದ್ದಿರುವ ಕಾರಣಕ್ಕೆ ಆರ್ಸಿಬಿ ಅಭಿಮಾನಿಗಳು ಕೊಹ್ಲಿ ಕಟ್ ಔಟ್ ಮುಂದೆಗಡೆ ಕುರಿ ಬಲಿ ಕೊಡುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ.
ಸಿಎಸ್ಕೆ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಗೆಲ್ಲುತ್ತಿದ್ದಂತೆ ಕೊಹ್ಲಿ ಬ್ಯಾನರ್ ಮುಂದೆ ಅಭಿಮಾನಿಗಳು, ಮೇಕೆ ಬಲಿಕೊಟ್ಟು ಸಂಭ್ರಮಿಸಿದ್ದಾರೆ. ಆದ್ರೆ ಆ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಹೌದು, ಮೊಳಕಾಲ್ಮೂರು ತಾಲೂಕಿನ ಮಾರಮ್ಮನಹಳ್ಳಿ ಗ್ರಾಮದಲ್ಲಿ ಆರ್ಸಿಬಿ ಅಭಿಮಾನಿಗಳು ಮಚ್ಚಿನಿಂದ ಮೇಕೆಯನ್ನು ಕಡಿದು ಕೊಹ್ಲಿ ಪೊಸ್ಟರ್ಗೆ ರಕ್ತಾಭಿಷೇಕ ಮಾಡಿದ್ದಾರೆ. ಇದೇ ದೃಶ್ಯವನ್ನು ತಮ್ಮ ಫೋನ್ನಲ್ಲಿ ಸೆರೆ ಮಾಡಿಕೊಂಡು call-me-143-kalki ಹೆಸರಿನ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ RCB Vs CSK ಮ್ಯಾಚ್ ಕಥೆ ಏನು?
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಶಾಕ್ ಆಗಿದ್ದಾರೆ. ಆ ಕೂಡಲೇ ಮೂವರು ಯುವಕರಾದ ಸಣ್ಣ ಪಾಲಯ್ಯ, ಜಯ್ಯಣ್ಣ, ತಿಪ್ಪೇಸ್ವಾಮಿ ವಿರುದ್ದ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
