ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂಬ ಒದಂತಿಗಳು ರಾಜ್ಯದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ ಅವರು ದೇವರ ಆಶೀರ್ವಾದದಿಂದ ಆರೋಗ್ಯವಾಅಗಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹರಡುತ್ತಿರುವ ಊಹಾಪೋಹಗಳಿಗೆ ಯಾರು ಕಿವಿ ಕೊಡಬೇಡಿ ದೇವರ ಆಶೀರ್ವಾದದಿಂದ ಕುಮಾರಣ್ಣ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೇ.17ವರೆಗೆ ಮೊದಲ ಹಂತದಲ್ಲಿ ಪರಿಶಿಷ್ಟ ಜಾತಿಗಳ ಮರು ಸಮೀಕ್ಷೆ
ಈ ಹಿಂದೆ ಮೂರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿಯವರು, ಇತ್ತೀಚೆಗಷ್ಟೇ ಆರೋಗ್ಯ ಪರೀಕ್ಷೆಗಾಗಿ ಅಪೋಲೋ ಆಸ್ಪತ್ರೆಯಲ್ಲಿ ದೀರ್ಘಾಕಾಲ ಸಮಯ ಕಳೆದಿದ್ದು, ಬಳಿಕ ಜಿಂದಾಲ್ ನೇಚರ್‌ಕ್ಯೂರ್ ಸಂಸ್ಥೆಗೂ ಭೇಟಿ ನೀಡಿದ್ದಾರೆನ್ನಲಾಗಿದ್ದು, ಈ ಬೆಳವಣಿಗೆ ಅವರ ಆರೋಗ್ಯ ಸಮಸ್ಯೆ ಕುರಿತು ಊಹಾಪೋಹಗಳಿಗೆ ಕಾರಣವಾಗಿದೆ.
