Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು: ದಿನೇಶ್ ಗುಂಡೂರಾವ್ !
  • Bangalore
  • Crime
  • Front news
  • Politics
  • State

ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು: ದಿನೇಶ್ ಗುಂಡೂರಾವ್ !

admin May 6, 2025
Spread the love

ಬೆಂಗಳೂರು: ಸುಭಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು ಕೈ ಹಾಗೂ ಕಮಲ ನಾಯಕರ ನಡುವೆ ಜಟಾಪಟಿ ಜೋರಾಗಿಯ ನಡೆಯುತ್ತಿದ್ದು ಇದೀಗ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತಹ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ.

ಸುಹಾಸ್ ಶೆಟ್ಟಿ ರೌಡಿಶೀಟರ್ ಕುರಿತಾಗಿ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿರುವ ದಿನೇಶ್ ಗುಂಡೂರಾವ್ ಅವರು ತಮ್ಮ ಸೋಶಿಯಲ್ ಖಾತೆ ಎಕ್ಸ್ ನಲ್ಲಿ ಮಹತ್ವದ ಕಲೆಗಳನ್ನು ಬಿಡುಗಡೆ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಚಳಿಬಿಡಿಸಿದ್ದಾರೆ.

ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.

ಸುಹಾಸ್ ಶೆಟ್ಟಿ ವಿರುದ್ಧ ರೌಡಿಶೀಟರ್ ಓಪನ್ ಆಗಿದ್ದು 2020ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ ಇಂದು ಸುಹಾಸ್‌ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?

ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ಇದನ್ನೂ ಓದಿ: ʼಕೈʼ ಸರ್ಕಾರ ವಿರುದ್ಧ ಬಿವೈವಿ ಆಕ್ರೋಶ

ದಕ್ಷಿಣ ಕನ್ನಡದ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ ಎಂದು ಬರೆದು ಕೊಂಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ʼಕೈʼ ಸರ್ಕಾರ ವಿರುದ್ಧ ಬಿವೈವಿ ಆಕ್ರೋಶ
Next: ವಿಜೇತ ಕ್ರೀಡಾಪಟುಗಳಿಗೆ ಸಚಿವರಿಂದ ಸನ್ಮಾನ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.