Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬೊಮ್ಮಾಯಿ
  • Bangalore
  • Front news
  • Politics
  • State

ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬೊಮ್ಮಾಯಿ

admin May 7, 2025
Spread the love

ಬೆಂಗಳೂರು: ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿದ್ದ ಪಾಕ್ ಪೋಷಿತ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದ್ದು, ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ದಾಳಿ ನಡೆದಿದ್ದು, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದಕರ ನೆಲೆಗಟ್ಟು ಮತ್ತು ತರಬೇತಿ ನೀಡುವ ಫ್ಯಾಕ್ಟರಿ ಆಗಿ ಪರಿವರ್ತನೆ ಆಗಿದೆ. ಇದು ಕೇವಲ ಭಾರತ ಅಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸ ಭಾರತೀಯ ಸೇನೆ ಮಾಡಿದೆ. ಇದು ಇನ್ನೂ ಪ್ರಾರಂಭ ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕರಿರುವವರೆಗೂ ಈ ಕಾರ್ಯಾಚರಣೆ ನಡೆಯುತ್ತದೆ ಎಂದು ಹೇಳಿದ್ದಾರೆ.

ಇಂತಹ ಸಂದರ್ಭದಲ್ಲಿ ಎಲ್ಲ ಭಾರತೀಯರು ಒಂದಾಗಿ ನಮ್ಮ ಪ್ರಧಾನಿ ನರೇಂದ್ರ ಮೊದಿ ಹಾಗೂ ನಮ್ಮ ದೇಶದ ಪ್ರಭಲ ಸೇನಾ ಪಡೆ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು. ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ದೇಶಗಳು ಭಾರತದ ಈ ಕಾರ್ಯಾಚರಣೆಗೆ ಬೆಂಬಲ ಸೂಚಿಸಬೇಕು. ಇದನ್ನೂ ಓದಿ: ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ

ಪಹಲ್ಗಾಮ್ ದಾಳಿಯಲ್ಲಿ ಮರಣ ಹೊಂದಿದ ಹಲವಾರು ಮುಗ್ದ ಭಾರತಿಯರ ಕುಟುಂಬಗಳ ಭಾವನೆ ಹಾಗೂ ತಮ್ಮ ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ಎಂದು ನಮ್ಮ ಪ್ರಧಾನಮಂತ್ರಿ ಹೆಸರಿಸಿ, ಹೆಸರಿಗೆ ತಕ್ಕ ಹಾಗೆ ದಾಳಿ ಮಾಡಿದ್ದಾರೆ. ಅವರ ಜೊತೆಗೆ ನಿಂತ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಭಾರತೀಯ ಸೇನೆಗೆ ಹೃದಯ ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ
Next: 66 ನವ ದಂಪತಿಗಳ ಮದುವೆ ಕಾರ್ಯಕ್ರಮಕ್ಕೆ ಕೆಹೆಚ್. ಮುನಿಯಪ್ಪ ಚಾಲನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.