Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಕೆಶಿ
  • National
  • Politics

ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಕೆಶಿ

admin May 7, 2025 1 minute read
Spread the love

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ‘ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ’ ಎಂದು ತಿಳಿಸಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬೊಮ್ಮಾಯಿ

ಕರ್ನಾಟಕದ ಪ್ರಜೆಗಳು ಪೆಹಲ್ಗಮ್ ದಾಳಿಯಲ್ಲಿ ಮೃತಪಟ್ಟಿದ್ದರ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಸಗರ ದಲಿತರ ಕೇರಿಗೆ ಸಿಗದ ನೀರು
Next: ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.