ಬೆಂಗಳೂರು: ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ನೂತನವಾಗಿ ಆರಂಭವಾಗಿರುವ ಸ್ಪರ್ಶ್ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸುತ್ತೂರು ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು, ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಗಣಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ, ಸ್ಪರ್ಶ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶರಣ್ ಪಾಟೀಲ್ ಅವರು ಹಾಜರಿದ್ದರು.
