ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಜನತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ ಇಂದು ಹಾರೋಹಳ್ಳಿಯಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್ ಅವರು ಉದ್ಘಾಟಿಸಿದರು.
ಜಿಲ್ಲಾಡಳಿತದ ವತಿಯಿಂದ ಹಾರೋಹಳ್ಳಿ ಟೌನ್‌ನಲ್ಲಿರುವ ಕೆಪಿಎಸ್ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿಇಂದು (ಮೇ.19ರ ಸೋಮವಾರ) ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದ ನೂರಾರು ಜನ ತಮ್ಮ ಸಮಸ್ಯೆಗಳನ್ನು ಪತ್ರದ ಮೂಲಕ ಸಚಿವರಿಗೆ ಮನವಿ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ:ಮಳೆರಾಯನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಮಂದಿ ಹೈರಾಣ, ಮುಳುಗಿದ ಸಿಸಿಬಿ ಕಚೇರಿ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಯಶವಂತ್ ವಿ. ಗುರುಕರ್, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ರಾಮನಗರ ಉಪವಿಭಾಗಾಧಿಕಾರಿ ಬಿನೋಯ್, ಹಾರೋಹಳ್ಳಿ ಹಾಗೂ ಕನಕಪುರ ತಹಶೀಲ್ದಾರರು, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
