ಬೊಮ್ಮನಹಳ್ಳಿ: ಬೆಂಗಳೂರಿನಲ್ಲಿ ನಗರದಲ್ಲಿ ಭಾನುವಾರ ರಾತ್ರಿ (ಮೇ 18) ರಂದು ಸುರಿದ ಭಾರಿ ಮಳೆಯಿಂದಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಾದ ಹೆಚ್‌ಎಸ್‌ಆರ್ ಲೇಔಟ್, ಹೊಂಗಸಂದ್ರದ ಓಂ ಶಕ್ತಿ ಬಡಾವಣೆ ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹಲವು ಪ್ರವಾಹದಿಂದ ಪ್ರಭಾವಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ನೇರ ಅವಲೋಕನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೊಮ್ಮನಹಳ್ಳಿ ಸುತ್ತಮುತ್ತ ಬಿಎಮ್ಆರ್‌ಸಿಎಲ್ ಕಾಮಗಾರಿ ನಡೆಯುತ್ತಿದ್ದು ಮಳೆ ನೀರು ಹರಿಯಲು ಸುಗಮದಾರಿ ಇಲ್ಲದ ಕಾರಣ ಅಲ್ಲಲಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಹಾಗಾಗಿ ಸ್ಥಳೀಯ ನಿವಾಸಿಗಳು ಯಾರೂ ಕೂಡ ಗಾಬರಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದರು.
ಇನ್ನು ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿ ಅವರ ತಕ್ಷಣದ ಅಗತ್ಯತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ: ಡಿಕೆಶಿ
ಒಳಚರಂಡಿ ನೀರಿನ ಹೊರೆತಕ್ಷಣ ದೂರ ಮಾಡುವ ಕಾರ್ಯ, ಸ್ವಚ್ಛತಾ ಕ್ರಮಗಳು ಕಾರ್ಯಾಚರಣೆಯಲ್ಲಿ ತೊಡಗಿಸಲಾಗಿದೆ. ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.
ಸಮುದಾಯದೊಂದಿಗೆ ನಾವು ಸದಾ ನಿಲ್ಲುತ್ತೇವೆ. ಶೀಘ್ರದಲ್ಲೇ ಸಾಮಾನ್ಯ ಸ್ಥಿತಿಗೆ ತರುವ ಉದ್ದೇಶದೊಂದಿಗೆ ಪ್ರತಿಯೊಂದು ಹಂತದಲ್ಲೂ ಜವಾಬ್ದಾರಿ ವಹಿಸುತ್ತೇವೆ ಕೆಲಸಗಳನ್ನು ಮಾಡಿಸುತ್ತಿದ್ದೇವೆ ಎಂದರು.
