ಬೆಂಗಳೂರು: ತುಮಕೂರು ನಗರದಲ್ಲಿರುವ ಹೆಸರಾಂತ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿರುವುದರಿಂದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸುವ ಎಲ್ಲಾ ಸುಳಿವು ಒಂದೊಂದಾಗಿ ಹೊರಬೀಳುತ್ತಿವೆ.
ಹೌದು, ತುಮಕೂರಿನ ಹೆಸರಾಂತ ಎಸ್ ಎಸ್ ಐ ಟಿ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದು, ಇದೀಗ ಈ ದಾಳಿಗೂ ಮತ್ತು ಅಕ್ರಮ ಚಿನ್ನ ಕಳ್ಳ ಸಾಗಣಿಕೆ ಮಾಡಿದ ನಟಿ ರನ್ಯಾ ರಾವ್ ಗೂ ನಂಟಿದೆ ಎಂಬುದು ರಾಜ್ಯ ರಾಜಕೀಯದಲ್ಲಿ ಭಾರಿ ಗ್ರಾಸವಾಗಿ ಚರ್ಚೆಯಾಗುತ್ತಿದೆ.
ಇದಕ್ಕೆ ಉದಾಹರಣೆ ಎಂಬಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿರುವ ಮಾತೆ ಸಾಕ್ಷಿಯಾಗಿದೆ.
ಗೃಹ ಸಚಿವ ಜಿ ಪರಮೇಶ್ವರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿರುವುದರ ಕುರಿತಾಗಿ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಟಿ ರನ್ಯಾ ರಾವ್ಗೆ ಪರಮೇಶ್ವರ್ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಇದನ್ನು ಅವರೇ ತಿಳಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾನು ಪರಮೇಶ್ವರ್ ಜೊತೆ ಮಾತನಾಡಿದ್ದೇನೆ ರನ್ಯಾಗೆ 25 ಲಕ್ಷ ರೂ. ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೆಂದು ಆ ಹಣ ಕೊಟ್ಟಿರಬಹುದು. ಪರಮೇಶ್ವರ್ ಪ್ರಭಾವಿ ವ್ಯಕ್ತಿ. ಆದರೆ, ರನ್ಯಾರಂಥ ಹೆಣ್ಮಗಳು ತಪ್ಪು ಮಾಡಿದ್ದರೆ ಕ್ರಮ ಆಗಲಿ. ಪರಮೇಶ್ವರ್ ಮೇಲೆ ಜವಾಬ್ದಾರಿ ಇದೆ, ಅವರು ಗೃಹ ಸಚಿವರು. ನಾನು ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಅವರು ಆರೋಗ್ಯವಾಗಿ ಇದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: SSIT ಸಂಸ್ಥೆಗಳ ಮೇಲೆ ಇಡಿ ದಾಳಿ ಡಿಸಿಎಂ ಹೇಳಿದ್ದೇನು?
ಈ ಮೂಲಕ ರನ್ಯಾಗೆ ಪರಮೇಶ್ವರ್ ಒಡೆತನದ ಸಂಸ್ಥೆಯಿಂದ ಹಣ ವರ್ಗಾವಣೆ ಮಾಡಿರುವ ವಿಚಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಹಾಗಾದ್ರೆ ಗೃಹ ಸಚಿವ ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸುತ್ತಿರುವುದು ಹಾಗೂ ಚಿನ್ನಕಳ್ಳ ಸಾಗಾಣಿಕೆ ನಡೆಸಿದ ನಟಿ ರನ್ಯಾ ರಾವ್ ಗೂ ಸಂಬಂಧ ಇದ್ಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.
