ಬೆಂಗಳೂರು: ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ತಮನ್ನಾ ಭಾಟಿಯಾ ಅವರನ್ನ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.
ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ಮಾಡಿರುವುದಕ್ಕೆ ಕರ್ನಾಟಕ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ಚಿತ್ರರಂಗದ ನಟ ನಟಿಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕದ ಪ್ರಾಜೆಕ್ಟ್ ಗಳಿಗೆ ಕನ್ನಡ ನಟ ನಟಿಯರನೇ ಆಯ್ಕೆ ಮಾಡಬೇಕೆ ಹೊರತಾಗಿ ಬೇರೆ ರಾಜ್ಯದವರನ್ನ ಬ್ರಾಂಡ್ ರಾಯಭಾರಿಯಾಗಿ ಆಯ್ಕೆ ಮಾಡುವುದು ಸರಿ ಅಲ್ಲ ಎಂದು ಈಗಾಗಲೇ ರಾಜ್ಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಇನ್ನು ತಮನ್ನಾ ಭಾಟಿಯಾ ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯನ್ನಾಗಿ ಯಾಕೆ ನೇಮಕ ಮಾಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಅವರು ಕಷ್ಟಪಡಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮನ್ನಾ ಅವರನ್ನು ಆಯ್ಕೆ ಮಾಡುವ ಮೊದಲು ನಾವು ಕನ್ನಡ ನಟಿಯರನ್ನು ಸಂಪರ್ಕಿಸಿದ್ದೇವೆ. ಮೊದಲಿಗೆ ರಶ್ಮಿಕಾ ಮಂದಣ್ಣ, ಶ್ರೀ ಲೀಲಾ, ದೀಪಿಕಾ ಪಡುಕೋಣೆ ಸೇರಿದಂತೆ ಇನ್ನೂ ಹಲವಾರು ನಟಿಯರನ್ನು ಸಂಪರ್ಕಿಸಿದ್ದೇವೆ ಆದರೆ ಅವರು ಬೇರೆ ಸೌಂದರ್ಯವರ್ಧಕಗಳ ಬ್ರಾಂಡ್ ಅಂಬಾಸಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಮುಂದಿನ ಎರಡು ವರ್ಷ ಯಾರು ಬಿಡುವಿಲ್ಲ ಎಂಬ ಕಾರಣಕ್ಕೆ ನಾವು ನಟಿ ತಮನ್ನಾ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಎಂಬಿ ಪಾಟೀಲ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ:
ನಾವು ಕೆಎಸ್ಡಿಎಲ್ ವಹಿವಾಟನ್ನು ಮುಂದಿನ 3 ವರ್ಷಗಳಲ್ಲಿ 5,000 ಕೋಟಿ ರೂ.ಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದೇವೆ. ಆಗ ಹಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿ ಬರಲೆಂದು ನಾನು ಆಶಿಸುತ್ತೇನೆ ಎಂದಿದ್ದಾರೆ.
ಇನ್ನು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ಮಿಲಿಯನ್ ಫಾಲೋಯರ್ಸ್ ಹೊಂದಿರುವ ತಮನ್ನಾ ಭಾಟಿಯಾ ಅವರನ್ನು ಅವರ ಅಖಿಲ ಭಾರತೀಯ ಮಟ್ಟದ ವರ್ಚಸ್ಸನ್ನು ನೋಡಿ ನೇಮಿಸಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
