ಮೈಸೂರು: ಕೊರೊನಾ ಹೆಮ್ಮಾರಿ ವೈರಸ್ ಮತ್ತೆ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 35 ಸಕ್ರಿಯ ಪ್ರಮಾಣಗಳು ದಾಖಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇಂದು (ಶನಿವಾರ ಮೇ 24) ರಂದು ಮೈಸೂರಿನ ತಮ್ಮ ವಾಸದ ಬಳಿ ಸಾರ್ವಜನಿಕರ ಮನವಿಯನ್ನು ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ಮಾಸ್ಕ್ ಧರಿಸಿಕೊಂಡು ಬಂದು ಸಾರ್ವಜನಿಕರಿಗೂ ಮಾಸ್ಕ್ ಧರಿಸುವಂತೆ ಮನವಿ ಮಾಡಿದರು.
ಇನ್ನು ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಹೆಚ್ಚುತ್ತಿರುವುದರಿಂದ ಬೆಂಗಳೂರು ನಗರದಲ್ಲಿ ನಾಳೆಯಿಂದ (ಮೇ 2)5 ರಿಂದ ಕೊರೊನಾ ಟೆಸ್ಟಿಂಗ್ ಕೂಡ ಆರಂಭವಾಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ
ಇನ್ನು ಬೆಂಗಳೂರಲ್ಲಿ ಕೊವಿಡ್‌ನ ಅತಿ ಹೆಚ್ಚು ಆ್ಯಕ್ಟಿವ್ ಕೇಸ್ ಪತ್ತೆಯಾಗಿರುವುದರಿಂದ ನಾಳೆಯಿಂದ ಕೊವಿಡ್ ಟೆಸ್ಟ್ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಕೊವಿಡ್ ಟೆಸ್ಟ್ ಮಾಡಲು ಸಿದ್ಧತೆ ನಡೆದಿದೆ.
