ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸಿಎಂ ಆದಾಗ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಸೇವೆಯನ್ನು ಆರಂಭ ಮಾಡಿದ್ದರು. ನಂತರ ಬಿಜೆಪಿ ಸರ್ಕಾರ ಬಂದ ಮೇಲೆ ಇಂದಿರಾ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಗಳು ಸೊರಗಿ ಹೋಗಿದ್ದ ಎಲ್ಲಾ ಕ್ಯಾಂಟೀನ್ ಗಳನ್ನು ಮತ್ತೆ ರೀ ಓಪನ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಣತೊಟ್ಟಿದ್ದಾರೆ. ಈಗಾಗಲೇ ರಾಜ್ಯದಲ್ಲಿರುವ ಎಷ್ಟೋ ಇಂದಿರಾ ಕ್ಯಾಂಟೀನ್ ಗಳನ್ನು ರೀ ಓಪನ್ ಮಾಡಿಸಿದ್ದಾರೆ. ಇಂದು (ಶನಿವಾರ ಮೇ 24) ರಂದು ಮೈಸೂರಿನ ಹಿನಕಲ್ ನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದಾರೆ.
ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ.
2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿದ್ದೇನೆ ರಂದು ಹೇಳಿದರು. ಇದನ್ನೂ ಓದಿ: ಮತ್ತೆ ಕೊರೊನಾ; ಮಾಸ್ಕ್ ಧರಿಸಿ ಮನವಿ ಸ್ವೀಕರಿಸಿದ ಸಿಎಂ
ಇನ್ನು ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ತಿಳಿಸಿದರು.
