ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಇಂದು (ಸೋಮವಾರ ಮೇ 26) ರಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮಳೆ ಪ್ರಾರಂಭ ಆಗಿರುವುದರಿಂದ ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಹಲವೆಡೆ ಇಂದಿನಿಂದ ಮಳೆಯ ಆರ್ಭಟ ಜೋರಾಗಿ ಇರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಕಂಡ್ರೆ ಬಿಜೆಪಿಗೆ ಭಯ : ಶರಣ ಪ್ರಕಾಶ್ ಪಾಟೀಲ್
