Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶೀಘ್ರ ಸಮಸ್ಯೆ ಬಗೆಹರಿಸಿ: ಮಹೇಶ್ವರ್ ರಾವ್
  • Bangalore
  • State

ಶೀಘ್ರ ಸಮಸ್ಯೆ ಬಗೆಹರಿಸಿ: ಮಹೇಶ್ವರ್ ರಾವ್

admin May 26, 2025 1 minute read
Spread the love

ಬೆಂಗಳೂರು: ಮಳೆಯಿಂದ ನಗರದಲ್ಲಿ ಹಲವಾರು ಅವಾಂತರಗಳು ಸೃಷ್ಟಿಯಾಗುತ್ತಿದ್ದು ಪ್ರವಾಹ ಪೀಡಿತ ಪ್ರದೇಶಗಳಿಗೆ ಶೀಘ್ರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಲಯ ಆಯುಕ್ತರು ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು (ಸೋಮವಾರ ಮೇ 26) ರಂದುನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರುದ, ನಗರದಲ್ಲಿ ಮಳೆಗಾಲದ ವೇಳೆ ಪ್ರತಿ ವಲಯದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಮಳೆಗಾಲದ ವೇಳೆ ರಾಜ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜಕಾಲುವೆ ವಿಭಾಗದಿಂದ ನಿರಂತರವಾಗಿ ಹೂಳು ತೆಗದು ಸ್ವಚ್ಛತೆ ಕಾಪಾಡುವ ಕೆಲಸ ಮಾಡಬೇಕು. ಇನ್ನು ಆರ್‌.ಸಿ.ಸಿ ತಡೆಗೋಡೆ ನಿರ್ಮಾಣ ಮಾಡದ ರಾಜಕಾಲುವೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸದರು.

ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ ಈಗಾಗಲೇ 166 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ವಲಯ ಆಯುಕ್ತರು ಅವುಗಳಿಗೆ ದೃಡೀಕರಣ ಮಾಡಿ ನೀಡಬೇಕು. ಇನ್ನು ಬಾಕಿಯಿರುವ 44 ಸ್ಥಳಗಳಲ್ಲಿ ಕೂಡಲೇ ತಾತ್ಕಾಲಿಕ ಕ್ರಮ ಕೈಗೊಳ್ಳುವುದರ ಜೊತೆಗೆ ಶಾಶ್ವರ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ವೇಳೆ ರಸ್ತೆಗಳ ಮೇಲೆ ನೀರು ನಿಂತು ಸಂಚಾರ ದಟ್ಟಣೆ ಹೆಚ್ಚುವ ಸ್ಥಳಗಳ ಪಟ್ಟಿಯನ್ನು ಸಂಚಾರ ಪೊಲೀಸ್ ವಿಭಾಗದವರು ನೀಡಿದ್ದು, ಅಂತಹ ಸ್ಥಳಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಜೊತೆಗೆ ರಸ್ತೆ ಬದಿಯ ಚರಂಡಿ/ಶೋಲ್ಡರ್ ಡ್ರೈನ್‌ಗಳಲ್ಲಿ ಹೂಳು ತೆಗೆಯುವಿಕೆ ಮತ್ತು ಶುಚಿಗೊಳಿಸುವಿಕೆ ಕಾರ್ಯ ನಿರಂತರವಾಗಿ ಮಾಡಲು ತಿಳಿಸಿದರು. ಇದನ್ನೂ ಓದಿ: ಬಿಜೆಪಿ 18 ಶಾಸಕರ ಅಮಾನತು ವಾಪಸ್‌

ಸ್ಲೂಯಿಸ್ ಗೇಟ್ ಅಳವಡಿಕೆಗೆ ಕ್ರಮ

ಪಾಲಿಕೆ ಅಧೀನದಲ್ಲಿ 183 ಕೆರೆಗಳು ಬರಲಿದ್ದು, ಈ ಪೈಕಿ 13 ಕೆರೆಗಳಿಗೆ ಸ್ಲೂಯಿಸ್ ಗೇಟ್ ಗಳನ್ನು ಅಳವಡಿಸಲಾಗಿದೆ. ಸ್ಲೂಯಿಸ್ ಗೇಟ್ ಅಳವಡಿಸುವ ಕೆರೆಗಳಲ್ಲಿ ನೀರು ತುಂಬಿದ್ದರೆ ನೀರಿನ ಮಟ್ಟವನ್ನು ಕಡಿಮೆ ಮಾಡಿ ಮಳೆ ನೀರು ತುಂಬಲು ಅನುವಾಗುವಂತೆ ಮಾಡಬೇಕು. ಅದಲ್ಲದೆ ಉಳಿದ ಕೆರೆಗಳಿಗೂ ಹಂತ-ಹಂತವಾಗಿ ಸ್ಲೂಯಿಸ್ ಗೇಟ್ ಗಳನ್ನು ಅಳವಡಿಸಲು ಹಾಗೂ ಹೂಳು ತೆರವುಗೊಳಿಸದ ಕೆರೆಗಳಲ್ಲಿ ಹೂಳು ತೆರವು ಮಾಡುವ ವಿಚಾರವಾಗಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಧರೆಗುರುಳಿದ ಮರಗಳ ತೆರವು

ನಗರದಲ್ಲಿ ಮಳೆಗಾಲದ ವೇಳೆ ಗಾಳಿ ಸಹಿತ ಬೀಳುವ ಮಳೆಗೆ ಮರಗಳು ಹಾಗೂ ಮರದ ರೆಂಬೆ/ಕೊಂಬೆಗಳು ಧರೆಗುರುಳಿದ ಸಂದರ್ಭದಲ್ಲಿ ಅವುಗಳನ್ನು ಕೂಡಲೇ ತೆರವು ಮಾಡಲು ತಂಡಗಳು ಸದಾ ಸನ್ನದ್ಧವಾಗಿರಬೇಕು. ಇನ್ನು ಒಣಗಿದ/ಅಪಾಯ ಸ್ಥಿತಿಯಲ್ಲಿರುವ ಮರ, ರೆಂಬೆ/ಕೊಂಬೆಗಳನ್ನು ಗುರುತಿಸಿ ತೆರವುಗೊಳಿಸುವ ಕೆಲಸ ಮಾಡಲು ಸೂಚಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: 10 ಜೋಡಿಗಳಿಗೆ ಕಂಕಣ ಭಾಗ್ಯ
Next: ಸ್ವಚ್ಛವಾಹಿನಿ ಚಾಲಕಿಯರ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್‌ ಖರ್ಗೆ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.