ಬೆಂಗಳೂರು: ಗ್ರಾಮೀಣ ಮಹಿಳೆಯರು ಸ್ವತಂತ್ರವಾಗಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸ್ವಚ್ಛವಾಹಿನಿ ಮೂಲಕ ತಮ್ಮ ಜೀವನವನ್ನು ನಡೆಸುತ್ತಿರುವ ಮಹಿಳಾ ಚಾಲಕರಿಗೆಂದು ಸರ್ಕಾರವು ವಿಶೇಷ ಸೌಲಭ್ಯವನ್ನು ಒದಗಿಸುತ್ತಿದ್ದು, ಈ ಬಗ್ಗೆ ಇದೀಗ ಮಹಿಳಾ ಚಾಲಕರ ವೇತನ ಸೊಸಜಿತ ಸ್ಥಿತಿಯಲ್ಲಿ ವಾಹನ ನಿರ್ವಹಣೆ ಕುರಿತಾಗಿ ಪ್ರತ್ಯೇಕ ಅಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ತಿಳಿಸಿದ್ದಾರೆ.
ಈ ಕುರಿತು ನಗರದಲ್ಲಿದ್ದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಆರಂಭಿಸಿರುವ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇದನ್ನೂ ಓದಿ: ಶೀಘ್ರ ಸಮಸ್ಯೆ ಬಗೆಹರಿಸಿ: ಮಹೇಶ್ವರ್ ರಾವ್
ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಸಮಸ್ಯೆಗಳು, ಅವರ ಬೇಡಿಕೆಗಳು ಮತ್ತು ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ʼಸ್ವಚ್ಛ ವಾಹಿನಿʼ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಂಡು ಗ್ರಾಮೀಣ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 3469 ಮಹಿಳಾ ಚಾಲಕಿಯರು ತ್ಯಾಜ್ಯ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ ಎಂದೂ ಈ ಸಂದರ್ಭದಲ್ಲಿ ಸಚಿವರು ಹೇಳಿದರು.
ಸಭೆಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
