Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಯಾನಾದ ಉಪಾಧ್ಯಕ್ಷರ ಭೇಟಿ ಮಾಡಿದ ತೇಜಸ್ವೀ ಸೂರ್ಯ
  • International
  • National
  • Politics

ಗಯಾನಾದ ಉಪಾಧ್ಯಕ್ಷರ ಭೇಟಿ ಮಾಡಿದ ತೇಜಸ್ವೀ ಸೂರ್ಯ

admin May 26, 2025 1 minute read
Spread the love

ಗಯಾನಾ: ಡಾ. ಶಶಿ ತರೂರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಅಮೆರಿಕ ಪ್ರವಾಸದಲ್ಲಿರುವ ಭಾರತೀಯ ಸರ್ವಪಕ್ಷ ನಿಯೋಗದ ಸದಸ್ಯರು, ಗಯಾನಾ ಗಣರಾಜ್ಯದ ಉಪಾಧ್ಯಕ್ಷ ಘನತೆವೆತ್ತ ಭರತ್ ಜಗ್ದೇವ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ನಿಲುವು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಉಪಾಧ್ಯಕ್ಷ ಜಗ್ದೇವ್ ಅವರು ಈ ಹಿಂದೆ 12 ವರ್ಷಗಳ ಕಾಲ ಗಯಾನಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಈ ಪ್ರದೇಶದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು. ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು ಸ್ಪಷ್ಟವಾಗಿ ಖಂಡಿಸಿ, ಭಾರತದ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಗೆ ಬಲವಾದ ಬೆಂಬಲ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಭಾರತ-ಗಯಾನಾ ನಡುವೆ ಹಲವು ಕ್ಷೇತ್ರಗಳಲ್ಲಿನ ಸಹಯೋಗದ ಬಗ್ಗೆಯೂ ಈ ಸಂದರ್ಭದಲ್ಲಿ ಉಭಯ ನಾಯಕರು ಚರ್ಚಿಸಿದರು.

ಸಭೆಯ ನಂತರ ಮಾತನಾಡಿದ ಸೂರ್ಯ ರವರು, ನಮ್ಮ ನಿಯೋಗವು ಗಯಾನಾದ ಉಪಾಧ್ಯಕ್ಷರಾದ ಭರತ್ ಜಗ್ದೇವ್ ಅವರನ್ನು ಭೇಟಿ ಮಾಡಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಸೇರಿದಂತೆ ಹಲವು ವಿಷಯಗಳ ಕುರಿತು ಅವರೊಂದಿಗೆ ಮಾತನಾಡಿದ್ದು, ಜಗ್ದೇವ್ ಅವರು ದೇಶದ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರು. ಮೂಲಸೌಕರ್ಯ, ಇಂಧನ, ಫಿನ್ಟೆಕ್ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಪ್ರಮುಖ ಅಭಿವೃದ್ಧಿ ಯೋಜನೆಗಳಲ್ಲಿ ಭಾರತದೊಂದಿಗೆ ಸಹಕರಿಸಲು ಅವರು ತೀವ್ರ ಆಸಕ್ತಿ ವ್ಯಕ್ತಪಡಿಸಿದ್ದು ವಿಶೇಷ.

ಗಯಾನಾ ಹೊಸ ತೈಲ ನಿಕ್ಷೇಪಗಳನ್ನು ಕಂಡುಕೊಳ್ಳುತ್ತಿದ್ದು, ಶೇ. 30ರಷ್ಟು ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ, ಭಾರತೀಯ ವ್ಯವಹಾರಗಳಿಗೆ ಇಲ್ಲಿ ಅಪಾರ ಅವಕಾಶಗಳಿವೆ. ನಮ್ಮ ಎರಡೂ ರಾಷ್ಟ್ರಗಳ ನಡುವಿನ ಸಮನ್ವಯದ ಈ ಕ್ಷೇತ್ರಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ.” ಎಂದು ತಿಳಿಸಿದರು. ಇದನ್ನೂ ಓದಿ: ಶೀಘ್ರ ಸಮಸ್ಯೆ ಬಗೆಹರಿಸಿ: ಮಹೇಶ್ವರ್ ರಾವ್

ಇದಕ್ಕೂ ಮೊದಲು, ತೇಜಸ್ವಿ ಸೂರ್ಯ ಅವರು ಟೆಕ್ಸಿಲಾ ಅಮೆರಿಕನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ-ಸಹಿಷ್ಣುತಾ ನೀತಿ, ನಿಲುವುಗಳ ಬಗ್ಗೆ ಮಾತನಾಡಿ, ಪಾಕಿಸ್ತಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಸುದೀರ್ಘ ಹೋರಾಟವನ್ನು ಒತ್ತಿ ಹೇಳಿದ್ದು ಗಮನಾರ್ಹ.

 

 

About the Author

admin

Administrator

Visit Website View All Posts

Spread the love

Post navigation

Previous: ಸ್ವಚ್ಛವಾಹಿನಿ ಚಾಲಕಿಯರ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್‌ ಖರ್ಗೆ
Next: ಆರ್‌ ಅಶೋಕ & ವಿಜಯೇಂದ್ರ ಅಸಮರ್ಥರು: ಡಿಕೆ ಸುರೇಶ್

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.