ಬೆಂಗಳೂರು: ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದೌರ್ಜನ್ಯಕ್ಕೆ ಅಸಮರ್ಥ ರಾಜ್ಯಧ್ಯಕ್ಷ ಅಸಮರ್ಥ, ವಿರೋಧ ಪಕ್ಷದ ನಾಯಕರು ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಅಸಮರ್ಥರು ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದರು.
ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಅರ್ ದಾಖಲಾಗಿ ಅವರು ಎಂಥ ರತ್ನ ಎಂದು ಇಡೀ ರಾಜ್ಯಕ್ಕೆ ಗೊತ್ತಾದರೂ ಅಶೋಕ ಮತ್ತು ವಿಜಯೇಂದ್ರ ಯಾವುದೇ ಕ್ರಮ ಜರುಗಿಸಿಲ್ಲ, ಮುನಿರತ್ನ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದಾಗ್ಯೂ ಇವರಿಬ್ಬರು ಸುಮ್ಮನಿದ್ದಾರೆಂದರೆ ಎಷ್ಟು ಅಸಮರ್ಥ ನಾಯಕರು ಅನ್ನೋದು ಗೊತ್ತಾಗುತ್ತದೆ ಎಂದು ಸುರೇಶ್ ಹೇಳಿದರು. ಇದನ್ನೂ ಓದಿ: ಗಯಾನಾದ ಉಪಾಧ್ಯಕ್ಷರ ಭೇಟಿ ಮಾಡಿದ ತೇಜಸ್ವೀ ಸೂರ್ಯ
ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಸಾಬೀತಾಗಿ, ಎಫ್ಎಸ್ಎಲ್ ರಿಪೋರ್ಟ್ ಅದನ್ನು ದೃಢೀಕರಿಸಿ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದರೂ ಮುನಿರತ್ನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸುರೇಶ್ ಹೇಳಿದರು.
