ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜದಾದ್ಯಂತ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಏಕಾಏಕಿ ದಾಳಿ ನಡೆಸಿದ್ದು, ಸುಖನಿದ್ರೆಯಲ್ಲಿ ಜಾರಿದ ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ.
ಬೆಂಗಳೂರು, ಉಡುಪಿ, ಧಾರವಾಡ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್ಡಿಎ ಶೈಲ ಸುಭಾಷ್ ತತ್ರಾಣಿ, ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ಸೇರಿದಂತೆ ಏನು ಹೇಳು ಜಿಲ್ಲೆಗಳಲ್ಲಿ ವಿವಿಧ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
