ಅಹ್ಮದಾಬಾದ್: ಈ ಬಾರಿ ಐಪಿಎಲ್ ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡವು ಫೈನಲ್ ಗೆ ಲಗ್ಗೆ ಇಟ್ಟಿದ್ದು ಇಂದು (ಮಂಗಳವಾರ ಜೂನ್ 03) ರಂದು ಗುಜರಾತಿನ ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ತಂಡ Vs ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಹೈ ವೋಲ್ಟೇಜ್ ಪದ್ಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು ಕೋಟ್ಯಂತರ ಆರ್ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎನ್ನುವ ಭರವಸೆಯ ಮೂಲಕ ಆರ್ಸಿಬಿ ತಂಡವನ್ನು ಹುರಿದುಂಬಿಸುತ್ತಿದ್ದಾರೆ.
ಈಗಾಗಲೇ ಐಪಿಎಲ್ 2025 ಫೈನಲ್ ಪಂದ್ಯಾವಳಿಗೆ ಸಕಲ ಸಿದ್ಧತೆಗಳೊಂದಿಗೆ ಕ್ರೀಡಾಂಗಣ ಸಜ್ಜಾಗಿದ್ದು ಕೋಟ್ಯಂತರ ಅಭಿಮಾನಿಗಳು ಆರ್ಸಿಬಿ ಈ ಬಾರಿ ಕಪ್ ಗೆದ್ದೇ ಗೆಲ್ಲುತ್ತೆ ಎನ್ನುವ ಭರವಸದಿಂದ ಕಾಯುತ್ತಿದ್ದಾರೆ.
ಈ ಬಾರಿ ನಡೆಯುತ್ತಿರುವುದು 18ನೇ ಸೀಸನ್ ಹಾಗೂ ಆರ್ಸಿಬಿ ಆಟಗಾರ ವಿರಾಟ್ ಕೊಹ್ಲಿ ಜರ್ಸಿ ನಂಬರ್ ಕೂಡ 18 ಆಗಿರುವುದರಿಂದ, 18 ಎಂಬುದು ಲಕ್ಕಿ ನಂಬರ್ ಎಂದು ಅಭಿಮಾನಿಗಳು ಕಿಂಗ್ ಕೊಹ್ಲಿ ಧರಿಸಿರುವ ಜರ್ಸಿ ನಂಬರ್ ತೊಟ್ಟು ಕೊಹ್ಲಿಲಿಗೆ ಹುಮ್ಮಸ್ಸು ತೋರಿಸುತ್ತಿದ್ದಾರೆ. ಇದನ್ನೂ ಓದಿ: ಆರ್ಸಿಬಿ ತಂಡಕ್ಕೆ ವಿಶ್ ಮಾಡಿದ ವಿಜಯ ಮಲ್ಯ
ಯೆಸ್…ಐಪಿಎಲ್ 202ನ5 ಅಂತಿಮ ಹಣಾಹಣಿಯಲ್ಲಿ ಸಾವಿರಾರು ಆರ್ ಸಿಬಿ ಅಭಿಮಾನಿಗಳು ನಂ.18 ಜೆರ್ಸಿ ಧರಿಸುವುದರೊಂದಿಗೆ ಕೊಹ್ಲಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. RCB ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ನ್ನು 8 ವಿಕೆಟ್ಗಳಿಂದ ಸೋಲಿಸಿ ಫೈನಲ್ ಗೆ ಲಗ್ಗೆ ಇಡುವುದರೊಂದಿಗೆ ಈ ಬಾರಿ ಗೆಲ್ಲುವ ನೆಚ್ಚಿನ ತಂಡವಾಗಿ ಹೊರಹೊಮ್ಮಿದೆ.
