ಬೆಂಗಳೂರು: ಬೆಂಗಳೂರು ನಗರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳ ನೂಕುನುಗ್ಗಲಿನಿಂದ 11 ಜನ ಪ್ರಾಣ ಕಳೆದುಕೊಂಡು ಇಂದು ಕುಟುಂಬಸ್ಥರು ಕಣ್ಣಿರು ಹಾಕುವ ಪರಿಸ್ಥಿತಿ ಬಂದಿದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಈ ದುರ್ಘಟನೆ ಆಗಬಾರದಿತ್ತು ಆಗಿ ಹೋಗಿದೆ ಎಂದು ವಿಕ್ಕಿ ಬಿಕ್ಕಿ ಮಾಧ್ಯಮದವರ ಮುಂದೆ ಕಣ್ಣೀರು ಹಾಕಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿಕ್ಕ ಪುಟ್ಟ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಹತ್ತು ಜನರನ್ನ ನನ್ನ ಕಣ್ಣಾರೆ ಕಂಡಿದ್ದೇನೆ. ಇದನ್ನ ಯಾವ ಕುಟುಂಬದವರು ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಿನ್ನೆ (ಬುಧವಾರ ಜೂನ್ 04) ರಂದು ನಡೆದ ಕಾರ್ಯಕ್ರಮದಲ್ಲಿ ದುರ್ಘಟನೆ ಸಂಭವಿಸುತ್ತಿದ್ದಂತೆ ಪೊಲೀಸ್ ಕಮಿಷನರ್ ನನಗೆ ಕರೆ ಮಾಡಿ ಬೇಗ ಕಾರ್ಯಕ್ರಮವನ್ನು ಮುಗಿಸಿ ಎಂದು ಹೇಳಿದರು ಅದರಂತೆ ನಾವು ಕಾರ್ಯಕ್ರಮವನ್ನು ಮುಗಿಸಿದ್ದೇವೆ ಎಂದರು.
