ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತೊಳಿತಕ್ಕೆ ಒಳಗಾಗಿ 11 ಜನ ಸಾವನ್ನಪ್ಪಿರುವ ಘಟನೆಯನ್ನು ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆರೂಪಿಸುತ್ತಿದ್ದಾರೆ.
ಇನ್ನು ಈ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿಯವರು ಎಲ್ಲಾದರಲ್ಲೂ ರಾಜಕೀಯ ಮಾಡುತ್ತಾರೆ. ಇದರಲ್ಲಿ ನಾನು ರಾಜಕೀಯ ಮಾಡಲು ಹೋಗೋದಿಲ್ಲ. ಮೇಲ್ನೋಟಕ್ಕೆ ಯಾರು ಜವಾಬ್ದಾರರಿದ್ದಾರೆ, ಯಾರು ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲವೋ ಅಂತವರನ್ನ ಸಸ್ಪೆಂಡ್ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ: ಬಿವೈವಿ
ಈ ಘಟನೆಗೆ ಕುರಿತಂತೆ ನಾವು ಈಗಾಗಲೇ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದು ಯಾರೆಲ್ಲಾ ಈ ಘಟನೆಗೆ ಹೊಳೆಯಾಗಿದ್ದಾರೆ ಅವರೆಲ್ಲರ ವಿರುದ್ಧ ಕಾನೂನು ರೀತಿ ಯಾವ ರೀತಿ ಕ್ರಮ ಜರುಗಿಸಬೇಕು ಎಂದಿದ್ದಾರೆ.
