ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಲ್ತುಳಿತಕ್ಕೆ ಒಳಗಾಗಿ 11 ಜನ ಸಾವನ್ನಪ್ಪಿರುವ ಘಟನೆ ಸಂಭಂದಿಸಿದಂತೆ ವಿರೋಧ ಪಕ್ಷದ ನಾಯಕರು ಈ ಘಟನೆಗೆ ನೇರ ರಾಜ್ಯ ಸರ್ಕಾರವೇ ಕಾರಣವೆಂದು ಆರೋಪಿಸುತ್ತಿದ್ದಾರೆ.
ಇನ್ನು ಈ ಘಟನೆ ಕುರಿತಂತೆ ಕೇಂದ್ರ ಸಚಿವರಾಗಿರುವಂತಹ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು (ಶುಕ್ರವಾರ ಜೂನ್ 06) ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 11 ಜನ ಅಮಾಯಕರ ಪ್ರಾಣ ಹೋಗುವುದಕ್ಕೆ ಸಂಪೂರ್ಣ ನೇರ ಹೊಣೆಯಾಗಿರೋದು ಮಾನ್ಯ ಸಿದ್ದರಾಮಯ್ಯ ಸರ್ಕಾರವೇ ಹೊರತಾಗಿ ದಕ್ಷ ಪೊಲೀಸ್ ಅಧಿಕಾರಿಗಳಲ್ಲ ಎಂದು ಹೇಳಿದ್ದಾರೆ.
ತಾವು ಮಾಡಿರುವ ತಪ್ಪನ್ನು ಪೊಲೀಸರ ಮೇಲೆ ಹಾಕಿ ತಮ್ಮ ಹುಳುಕನ್ನು ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದ್ದಕ್ಕೆ ಸಿಎಂ ಹೇಳಿದ್ದೇನೆ?
ದಯಾನಂದ್ ದಕ್ಷತೆ ಬಗ್ಗೆ ಹೇಳೋದಾದರೆ, ಹೊಸ ವರ್ಷದಾಚರಣೆ ಸಂದರ್ಭದಲ್ಲಿ ಅವರೇ ನಗರದ ಪೊಲೀಸ್ ಕಮೀಷನರ್ ಅಗಿದ್ದರು, ಎಂಜಿ ರೋಡ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಲಕ್ಷಾಂತರ ಜನ ಸೇರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಮಾಡಿದ್ದರು, ಅಂಥ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
