ಕಲಬುರಗಿ ಕಲಬುರಗಿ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ಐಎಎಸ್, ಐಪಿಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗಾಗಿ ಸುಮಾರು ರೂ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತರಬೇತಿ ಕೇಂದ್ರವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮ ಪ್ರಭು ಪಾಟೀಲ್ ವೀಕ್ಷಿಸಿದರು. ಇದನ್ನೂ ಓದಿ: ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
