Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ
  • Bangalore
  • Front news
  • Politics
  • State

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ

admin June 17, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ, ಇಂದು (ಮಂಗಳವಾರ ಜೂನ್‌ 17) ರಂದು  ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಎಸ್.ಆರ್. ಶ್ರೀನಿವಾಸ್, ಅಧ್ಯಕ್ಷರು ಕೆ.ಎಸ್.ಆರ್.ಟಿ.ಸಿ ಹಾಗೂ ಶಾಸಕರು ಗುಬ್ಬಿ ವಿಧಾನಸಭಾ ಕ್ಷೇತ್ರ ಹಾಗೂ ಮೊಹಮ್ಮದ್ ರಿಜ್ವಾನ್ ನವಾಬ್, ಮಾನ್ಯ ಉಪಾಧ್ಯಕ್ಷರು, ಕೆ.ಎಸ್.ಆರ್.ಟಿ.ಸಿ ರವರು, ಸಾಂಕೇತಿಕವಾಗಿ 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಿದರು. ಸಾರಿಗೆ ಹಾಗೂ ಮುಜರಾಯಿ ಸಚಿವರು, ಅಭ್ಯರ್ಥಿಗಳಿಗೆ ಶುಭಾಷಯ ತಿಳಿಸಿದರು.

ಚಾಲನಾ ಸಿಬ್ಬಂದಿಯ ನೇಮಕಾತಿಯು ಪಾರದರ್ಶಕವಾಗಿ ಮಾಡಿದ್ದು, ಮಾನವ ಹಸ್ತಕ್ಷೇಪವಿರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿರುತ್ತದೆ ಎಂದು ಹೇಳಿದರು.

ನೇಮಕ ಪತ್ರ ವಿತರಣೆ ಮಾಡಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಹೊಸದಾಗಿ ನೇಮಕಗೊಂಡಿರುವ ಚಾಲನಾ ಸಿಬ್ಬಂದಿಗಳು ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ‌ನಿರ್ವಹಿಸಬೇಕು. ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ತಿಳಿಸಿದರು. ಅಪಘಾತವು ಸಂಭವಿಸಿದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ನಿಗಮವು ಕೊರೊನಾ ನಂತರ ಹಲವು ಅಡತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದ್ದು, ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿರುತ್ತದೆ. ನೌಕರರು ಹಾಗೂ ಅವರ ಅವಲಂಭಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ.

ನಾಲ್ಕು ಸಾರಿಗೆ ನಿಗಮಗಳಿಂದ ಸುಮಾರು 1000 ಕ್ಕೂ ಹೆಚ್ಚು ಮೃತರ ಅವಲಂಭಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ ರೂ.1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ ರೂ.10 ಲಕ್ಷಗಳ ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಸಿರು ಮತ್ತು ಸ್ವಚ್ಚತೆ ನಮ್ಮ ಸರ್ಕಾರದ ಧ್ಯೇಯ: ಡಿಕೆಶಿ

ಮಾನ್ಯ ಅಧ್ಯಕ್ಷರು, ಕರಾರಸಾ ನಿಗಮ ರವರು, ಕಳೆದ 08 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿದ್ದು, ಮಾನ್ಯ ಸಾರಿಗೆ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುತ್ತಾರೆ. ಚಾಲನಾ ಸಿಬ್ಬಂದಿಗಳ ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದ್ದು, ನಿಮ್ಮ ಆಯ್ಕೆಯಂತೆ ಘಟಕ ನಿಯೋಜನೆ ಮಾಡಿರುವುದಾಗಿ ತಿಳಿಸಿದರು. ಜವಾಬ್ದಾರಿಯುತ ಹುದ್ದೆಗೆ ನೇಮಕವಾಗುತ್ತಿದ್ದು, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕೆಂದು ತಿಳಿಸಿ, ಎಲ್ಲಾರಿಗೆ ಶುಭ ಹಾರೈಸಿದರು.

ಮಾನ್ಯ ಉಪಾಧ್ಯಕ್ಷರು, ಕರಾರಸಾ ನಿಗಮ ರವರು, ಹಲವು ವರ್ಷಗಳ ನಂತರ ನೇಮಕಾತಿ ಪ್ರಕ್ರಿಯೆಯು ಪ್ರಾರಂಭಗೊಂಡು 2000 ಚಾಲಕ ಕಂ ನಿರ್ವಾಹಕರು ನೇಮಕಗೊಂಡಿದ್ದು, ನೇಮಕಗೊಂಡಿರುವ ಎಲ್ಲರಿಗೂ ಶುಭವನ್ನು ಹಾರೈಸಿ, ನೇಮಕಗೊಂಡಿರುವ ಚಾಲನಾ ಸಿಬ್ಬಂದಿಗಳು  ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಹಸಿರು ಮತ್ತು ಸ್ವಚ್ಚತೆ ನಮ್ಮ ಸರ್ಕಾರದ ಧ್ಯೇಯ: ಡಿಕೆಶಿ
Next: ಬಿಜೆಪಿ ಬೃಹತ್ ಪ್ರತಿಭಟನೆ; ವಿಜಯೇಂದ್ರ, ಅಶೋಕ್, ಸೇರಿ ಪ್ರಮುಖರ ಬಂಧನ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.