ಬೆಂಗಳೂರು: ಕಳೆದ ಕೆಲವು ತಿಂಗಳುಗಳ ಹಿಂದೆ ಐಶ್ವರ್ಯ ಗೌಡ ಎನ್ನುವ ಮಹಿಳೆ ಡಿಕೆ ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ್ದರು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ನ ಮಾಜಿ ಸಂಸದ ಡಿಕೆ ಸುರೇಶ್ಗೆ ಅವರಿಗೆ ಸಂಕಷ್ಟ ಎದುರಾಗಿದೆ.
ಹೌದು, ನಾನು ಡಿಕೆ ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಎಂಬ ಮಹಿಳೆ ಚಿನ್ನಾಭರಣಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ: ಸಿಎಂ
(ಗುರುವಾರ ಜೂನ್ 19) ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
