ಬೆಂಗಳೂರು: ಮಾಜಿ ಸಂಸದ ಡಿಕೆ ಸುರೇಶ್ ಅವರು ಇಂದು (ಗುರುವಾರ ಜೂನ್ 19) ರಂದು ಅಧಿಕೃತವಾಗಿ ಬಮೂಲ್ನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಬೆಂಗಳೂರಿನ ಡೈರಿ ಸರ್ಕಲ್ನಲ್ಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಕಚೇರಿಯಲ್ಲಿ ಬಮೂಲ್ನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದರು. ಇದನ್ನೂ ಓದಿ: ಗೋಲ್ಡ್ ಸುರೇಶ್ ವಂಚನೆ ಕೇಸ್ ; ಇದರ ಅಸಲಿ ಕಥೆ ಏನು?
ನಂತರ ಮಾತನಾಡಿದ ಅವರು, ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಹೇಳಿದರು.
