ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಜರ್ನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆಗೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಜನಾರ್ಧನ್ ರೆಡ್ಡಿ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು.
ಅರ್ಜಿ ವಿಚಾರಣೆ ನಡೆಸಿದ ತೆಲಂಗಾಣದ ಹೈಕೋರ್ಟ್ ಈ ಶಿಕ್ಷೆಗೆ ತಡೆಯಾಜ್ಞೆ ನೀಡಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನು ಗಂಗಾವತಿ ಶಾಸಕ ಜನಾರ್ಧನ್ ರೆಡ್ಡಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗುತ್ತಿದ್ದಂತೆ ರದ್ದುಗೊಳಿಸಿದ ಶಾಸಕ ಸ್ಥಾನ ಈಗ ಮರುಸ್ಥಾಪನೆಯಾಗಿದೆ.
ಹೌದು, ಓಬಳಾಪುರಂ ಮೈನಿಂಗ್ ಪ್ರಕರಣದಲ್ಲಿ ಸಿಬಿಐ ವಿಶೇಷ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಗಾಲಿ ಜರ್ನಾದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ.
ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ನಿಯಮದಂತೆ ಏಳು ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನ ರದ್ದುಗೊಂಡಿತ್ತು. ಇದನ್ನೂ ಓದಿ: ಇದೇ ಮೊದಲ ಬಾರಿಗೆ 11 ದಿನಗಳ ಕಾಲ ಮೈಸೂರು ದಸರಾ ಆಚರಣೆ
ಆದರೆ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಜನಾರ್ದನ ರೆಡ್ಡಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆ ನೀಡಿದೆ.
