ಬೆಂಗಳೂರು: ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭ ಕೋರಿದ್ದಾರೆ.
ಈ ಕುರಿತು ಸೋಶಿಯಲ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡುವುದರ ಜೊತೆಗೆ ವ್ಯಕ್ತಿಯನ್ನು ಸದಾ ಚೈತನ್ಯಯುತವಾಗಿರುವಂತೆ ಮಾಡುತ್ತದೆ. ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಯೋಗವೆಂಬ ಅಮೂಲ್ಯ ಸಾಧನದ ಮೂಲಕ ಸ್ವಸ್ಥ, ಸುಂದರ ಬದುಕು ಕಟ್ಟಿಕೊಳ್ಳೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ಯೋಗಾಭ್ಯಾಸದಿಂದ ಆರೋಗ್ಯ ಸುಧಾರಣೆ: ಥಾವರ್ ಚಂದ್ ಗೆಹ್ಲೋಟ್

