ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಅಂತಾರಾಷ್ಟ್ರೀಯ ಯೋಗ ಪಟು ರಾಘವೇಂದ್ರ ಪೈ, ಕನ್ನಡ ಚಲಚಲಚಿತ್ರ ನಟ ಕೋಮಲ್ ಕುಮಾರ್, ಕನ್ನಡ ಚಲನಚಿತ್ರ ನಟಿ ಸುಧಾರಾಣಿ, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಡಾ. ಲಕ್ಷ್ಮೀ ಅಶ್ವಿನಿ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಸೇರಿದಂತೆ ಗಣ್ಯ ಮಹನೀಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಯೋಗವು ಕೇವಲ ವ್ಯಾಯಾಮವಲ್ಲ: ಎಂ ಸತೀಶ್ ರೆಡ್ಡಿ
