ಬೆಂಗಳೂರು: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನ ಮತ್ತು ಕರ್ನಾಟಕ ಕೇಸರಿ ಶ್ರೀ ಜಗನ್ನಾಥ್ ರಾವ್ ಜೋಶಿ ಅವರ ಜನ್ಮದಿನದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು (ಸೋಮವಾರ ಜೂನ್ 23) ಬೆಳಿಗ್ಗೆ 11.30 ಗಂಟೆಗೆ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದನ್ನೂ ಓದಿ: ಎಚ್ಎಸ್ಆರ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಶಂಕರ್ ನಾರಾಯಣ್ ರೆಡ್ಡಿ ವಿಟಿ ಆಯ್ಕೆ
ಈ ಕಾರ್ಯಕ್ರಮದಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಕೇಶವ್ ಪ್ರಸಾದ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
