ದೆಹಲಿ: ದೆಹಲಿ ಪ್ರವಾಸವನ್ನು ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ ಜೂನ್ 24) ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಮಾಡಿದರು.
ರಾಷ್ಟ್ರಪತಿಯನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯಕ್ಕೆ ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ವೇಳೆ ರಾಜ್ಯದ ಹೆಮ್ಮೆಯ ಗುರುತಾದ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದರು. ಇದನ್ನೂ ಓದಿ: ನಟ ಅಮೀರ್ ಖಾನ್ ಕುಶಲೋಪರಿ ವಿಚಾರಿಸಿದ ಸಿಎಂ
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್ ಸಿ ಮಾಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದನ ಸಚಿವರಾಗಿರುವಂತಹ ಜೆ ಕೆ ಜಾರ್ಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
