ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು, (ಬುಧವಾರ ಜೂನ್ 25) ಇಂದು ಬೊಮ್ಮನಹಳ್ಳಿ BBMP ವಲಯ ಕಚೇರಿಯಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಪರಿಹರಿಸಲು ಹಾಗೂ ಬಾಕಿಯಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಿದರು.
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ. ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳು. ಒಳಚರಂಡಿ ಶುದ್ಧೀಕರಣ. ಬೀದಿದೀಪಗಳ ಸಮಸ್ಯೆ ಮತ್ತು ನಿರ್ವಹಣೆ. ಒಳಚರಂಡಿ ಮತ್ತು ನೀರು ಪೂರೈಕೆಯ ಸಮಸ್ಯೆಗಳ ಪರಿಹಾರ. ಘನತ್ಯಾಜ್ಯ ನಿರ್ವಹಣೆ (SWM) ಕಾರ್ಯಾಚರಣೆ. ಅರಣ್ಯ ಮತ್ತು ಮರ ಕಡಿಯುವ ಕಾರ್ಯಾಚರಣೆ. ಕೆರೆ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಕೆಶಿ
ಎಲ್ಲ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟವಾದ ಮಾರ್ಗದರ್ಶನ ನೀಡಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸ್ವಚ್ಛ ಮತ್ತು ಸುರಕ್ಷಿತ ಬೊಮ್ಮನಹಳ್ಳಿ ನಿರ್ಮಾಣಕ್ಕಾಗಿ ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಡಾ.ಮಧು.N.N, ಮುಖ್ಯ ಅಭಿಯಂತರರಾದ ಶಶಿಕುಮಾರ್, BBMP, BWSSB, BESCOM, SWM, ಅರಣ್ಯ, ಕೆರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಸಂಬಂಧಿತ ಇಲಾಖಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
