ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಂ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಗುರುವಾರ ಜೂನ್ 26) HSR ಲೇಔಟ್ ನ ಬಿಡಿಎ ಕಾಂಪ್ಲೆಕ್ಸ್ನಲ್ಲಿರುವ ಶಾಸಕರ ಕಚೇರಿಯಲ್ಲಿ BBMP ಇಂಜಿನಿಯರ್ಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕರು ಅಧಿಕಾರಿಗಳಿಗೆ ಕಾಮಗಾರಿಗಳ ಬಗ್ಗೆ ಸೂಚನೆ ನೀಡಿದ್ದು,HSR ಲೇಔಟ್ ವ್ಯಾಪ್ತಿಯಲ್ಲಿನ ಉದ್ಯಾನವನಗಳ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡಬೇಕು. ಪಾದಚಾರಿ ಮಾರ್ಗದ ಅಭಿವೃದ್ಧಿ ಹಾಗೂ ಅಕ್ರಮ ಅತಿಕ್ರಮಣ ನಿವಾರಣೆ ಮಾಡಬೇಕು. ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಮುಂದಿನ ಅಭಿವೃದ್ಧಿ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಮಾರ್ಗಸೂಚಿ ಅನುಸಾರ ಎಲ್ಲಾ ಕೆಲಸ ಕಾರ್ಯಗಳು ನಡೀಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ
