ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಎಂದು ಕರ್ನಾಟಕ ಹೈಕೋರ್ಟ್ ಎಸ್ಐಟಿಗೆ ಆದೇಶಿಸಿದ್ದು ಇದರಲ್ಲಿರುವ ದೊಡ್ಡ ದೊಡ್ಡ ತಲೆಗಳೆ ಉರುಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಎಸ್ಐಟಿಗೆ ಆದೇಶಿಸಿದೆ. 187 ಕೋಟಿ ಲಪಟಾಯಿಸಿ ಬಾರ್, ಜ್ಯುವೆಲರಿ ಶಾಪ್, ಲೋಕಸಭೆ ಚುನಾವಣೆಗೂ ಹಣ ಬಳಕೆ ಮಾಡಿದ್ದಾರೆ. ಬಿಜೆಪಿ ಹೋರಾಟದ ಪರಿಣಾಮವಾಗಿ ನಾಗೇಂದ್ರ ಸಚಿವ ಸ್ಥಾನ ಕಳೆದುಕೊಂಡ್ರು ಎಂದರು. ಇದನ್ನೂ ಓದಿ: ಬೆಂಗಳೂರು ಟು ತುಮಕೂರಿಗೆ ಮೆಟ್ರೋ ಬೇಕು: ಜಿ.ಪರಮೇಶ್ವರ್
ಇನ್ನೂ ಖುದ್ದು ಸಿಎಂ ಅವರೇ ಈ ಹಗರಣದಲ್ಲಿ ಭಾಗಿಯಾಗಿದ್ದು, ಆದ್ದರಿಂದಲೇ ನ್ಯಾಯಾಲಯ ಈ ಪ್ರಕರಣವನ್ನ ಸಿಬಿಐಗೆ ವಹಿಸಿದೆ. ಇದರಿಂದ ಮುಂದೆ ದೊಡ್ಡ ತಲೆಗಳು ಉರುಳಲಿವೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
