ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿದೆ.
ಹೆಚ್.ಬಿ.ಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ರಮೇಶ್, ಕಂದಾಯ ವಸೂಲಿಗಾರರಾದ ಪೆದ್ದುರಾಜು ಹಾಗೂ ಕೆಂಗೇರಿ ಉಪ ವಿಭಾಗ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರರಾದ ಸಿ. ಸಂದಿಲ್ ಕುಮಾರ್ ರವರನ್ನು ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಇದನ್ನೂ ಓದಿ: ಏನಿದು ಬಿಬಿಎಂಪಿಯ ಸ್ಟಿಕರ್ ವಿವಾದ..?
