ಧಾರವಾಡ: ಕಳೆದ ಕೆಲವು ದಿನಗಳ ಹಿಂದೆ ಧಾರವಾಡದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಎಎಸ್ಪಿ ನಾರಾಯಣ ಭರಮನಿ ಅವರಿಗೆ ಕಾರ್ಯಕ್ರಮದ ವೇದಿಕೆ ಮೇಲೆ ಹೊಡೆಯಲು ಮುಂದಾಗಿದ್ದರು. ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿಯನ್ನು ಪಡೆಯುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿ ಮಾಡಿದ ಅವಳಿ ಒಲಿಂಪಿಕ್ಸ್ ಪದಕ ವಿಜೇತ
ಇನ್ನು ಈ ಕುರಿತು ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ. ಮೇಲಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಿಎಂ ಹಾಗೂ ಗೃಹ ಸಚಿವರು ಮಾತನಾಡಿದ್ದಾರೆ. ಮುಂದಿನ ನಿರ್ಧಾರ ಸರ್ಕಾರ ಕೈಗೊಳ್ಳುತ್ತದೆ. ಈಗ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಹೇಳಿದರು.
