Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ
  • Bangalore
  • Politics
  • State

ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ

admin July 3, 2025
Spread the love

ಬೆಂಗಳೂರು: ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ದೃಷ್ಟಿ ಪರೀಕ್ಷೆ ಮಾಡುವುದು, ದೃಷ್ಟಿದೋಷ ಹೊಂದಿದವರಿಗೆ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವುದು ಸೇರಿದಂತೆ ಸಾರ್ವಜನಿಕರ ಕಣ್ಣಿನ ಆರೈಕೆ ಮಾಡುವ ಉದ್ದೇಶದ ಆಶಾಕಿರಣ ಯೋಜನೆಯನ್ನ ಕಾಂಗ್ರೆಸ್ ಸರ್ಕಾರವು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದು, ಇಂದು (ಗುರುವಾರ ಜುಲೈ 03) ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಡಿರುವ “ಆಶಾಕಿರಣ ದೃಷ್ಟಿ ಕೇಂದ್ರ” ವನ್ನು ಡಿಸಿಎಂ  ಡಿ.ಕೆ ಶಿವಕುಮಾರ್ ರವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಆಶಾಕಿರಣ ದೃಷ್ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಇದರಲ್ಲಿ 5 ಕೇಂದ್ರಗಳು ಸಿ.ಎಸ್.ಆರ್ ಸಂಸ್ಥೆಯ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕ ವಿತರಣೆಗಳ ಸೇವೆಗಳನ್ನು ನೀಡಲು ಒಪ್ಪಿರುತ್ತಾರೆ. ಇದನ್ನೂ ಓದಿ: ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳಕರ್

ಅಶಾಕಿರಣ ಕಾರ್ಯಕ್ರಮ  ಸಿ.ಎಸ್.ಆರ್ ಸಂಸ್ಥೆ ರವರ ಸಹಯೋಗದೊಂದಿಗೆ – ಆಶಾಕಿರಣ ಕಾರ್ಯಕ್ರಮದಡಿಯಲ್ಲಿ, ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿ.ಎಸ್.ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಮಾಡಲಾಗಿರುತ್ತದೆ. ಈ ಕೇಂದ್ರಗಳು ನಮ್ಮ ಆರೋಗ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 393 ನಿಗದಿತ ಅಶಾಕಿರಣ ದೃಷ್ಟಿ ಕೇಂದ್ರಗಳ ಭಾಗವಾಗಿವೆ. ಸಿ.ಎಸ್.ಆರ್ ಪ್ರಾಯೋಜಿತ ಕೇಂದ್ರಗಳು ಮಾನವ ಸಂಪತ್ತು, ಉಪಕರಣಗಳು ಮತ್ತು ಉಚಿತ ಕನ್ನಡಕಗಳನ್ನು ಒದಗಿಸಲಾಗುತ್ತಿದೆ. ಅಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಮೂಲಸೌಕರ್ಯ ಮತ್ತು ಸಂಪನ್ಮೂಲಗಳನ್ನು ವೃದ್ಧಿಸುವ ಮೂಲಕ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಯನ್ನು ಒದಗಿಸಲಾಗುತ್ತಿದೆ.

ಕರ್ನಾಟಕ ಸರ್ಕಾರದ ಆಶಾಕಿರಣ ಯೋಜನೆಯು ದೃಷ್ಟಿ ಸಮಸ್ಯೆಗಳ ವಿರುದ್ಧದ ಹೋರಾಟದಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಿರುವ, ಶಾಶ್ವತ ಆಶಾಕಿರಣ ದೃಷ್ಠಿ ಕೇಂದ್ರಗಳ ಮೂಲಕ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ದೃಷ್ಟಿ ದೋಷವಿರುವವರಿಗೆ ಉಚಿತ ಕನ್ನಡಕ ವಿತರಣೆ ಹಾಗು ಕಣ್ಣಿನ ಸೇವೆಗಳನ್ನು ನೀಡುವುದಾಗಿದೆ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳಕರ್
Next: ಅರ್ಧತಲೆನೋವಿಗೆ ಇಲ್ಲಿದೆ ಮನೆಮದ್ದು!

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.