ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರೆವಾಸ ಅನುಭವಿಸುತ್ತಿರುವ ನಟಿ ರನ್ಯಾಗೆ ಇಡಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.
ಯೆಸ…ರನ್ಯಾರಾವ್ ಅಕ್ರಮ ಆಸ್ತಿಯನ್ನು ಹೊಂದಿದ್ದಾರೆ ಎಂಬ ಕಾರಣಕ್ಕೆ ಇದೀಗ ರನ್ಯಾಗೆ ಸಂಬಂಧಿಸಿದ ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಲು ಸಜ್ಜಾಗಿದ್ದಾರೆ
ಇನ್ನು ಈ ಬಾರಿ ಇಡಿ ಅಧಿಕಾರಿಗಳು ದೊಡ್ಡ ಆಘಾತ ನೀಡಿದ್ದಾರೆ. ಅಕ್ರಮ ಚಿನ್ನ ಸಾಗಾಟ ಪ್ರಕರಣ ಸಂಬಂಧ ನಟಿಯ ಕೋಟಿ ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಗ್ಯಾಂಗ್ನ ಹವಾಲ ದಂಧೆ ಹಾಗೂ ಇನ್ನೀತರ ವ್ಯವಹಾರ ಬಯಲಾಗಿವೆ. 34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಮನೆ ಮನೆಗೆ ಕುಡಿಯಲು ಕಾವೇರಿ ನೀರು
ರನ್ಯಾಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಕಲಿ ದಾಖಲೆಗಳನ್ನ ಸೃಷ್ಟಿಸಿ ಚಿನ್ನ ಕಳ್ಳಸಾಗಣೆ ಮಾಡ್ತಿದ್ದ ರನ್ಯಾರಾವ್ ಹವಾಲಾ ದಂಧೆ ನಡೆಸುತ್ತಿರೋದು ಇಡಿ ತನಿಖೆಯಲ್ಲಿ ಧೃಢಪಟ್ಟಿದೆ. ಈ ಬೆನ್ನಲ್ಲೇ ಆಸ್ತಿಯನ್ನು ಜಪ್ತಿ ಮಾಡಿದೆ.
