ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯಕ್ರಮವನ್ನು ಮೇ 5 ರಿಂದ ಪ್ರಾರಂಭಿಸಲಾಗಿತ್ತು. ಈಗಾಗಲೇ ಸಮೀಕ್ಷೆ ಅಂತಿಮವಾಗಿದ್ದು ಶೀಘ್ರದಲ್ಲೇ ಆಯೋಗದಿಂದ ವರದಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಆಂತರಿಕ ಮೀಸಲಾತಿಯನ್ನು ನಿರ್ಧರಿಸಲು ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸಮೀಕ್ಷೆಯ ಮೇಲ್ವಿಚಾರಣೆಯನ್ನು ವಹಿಸಿತ್ತು. ರಾಜ್ಯಾದ್ಯಂತ ಸಮೀಕ್ಷೆಯ ಸಮೀಕ್ಷಾ ಕಾರ್ಯ ಶೇ.90ರಷ್ಟು ಪೂಪರ್ಣಗೊಂಡಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50 ಪೂರ್ಣಗೊಂಡಿದೆ ಎನ್ನಲಾಗಿದೆ.
ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು, ರಾಜ್ಯದಾದ್ಯಂತ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆದಿದ್ದರು, ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಸಭೆ
ನಮಗೆ ಇನ್ನೂ ದತ್ತಾಂಶ ತಲುಪಿಲ್ಲ. ದತ್ತಾಂಶವನ್ನು ವಿಶ್ಲೇಷಿಸಬೇಕಿದ್ದು, ಸಮಯವನ್ನು ವ್ಯರ್ಥ ಮಾಡದೆ ವರದಿಯನ್ನು ಸಲ್ಲಿಸುತ್ತೇವೆಂದು ತಿಳಿಸಿದ್ದಾರೆ.
