Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಜಲಶಕ್ತಿ ಸಚಿವರಿಗೆ ಮನವಿ: ಡಿಕೆಶಿ
  • National
  • Politics

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಜಲಶಕ್ತಿ ಸಚಿವರಿಗೆ ಮನವಿ: ಡಿಕೆಶಿ

admin July 8, 2025 1 minute read
Spread the love

ದೆಹಲಿ: ಎತ್ತಿನಹೊಳೆ ಯೋಜನೆ ವಿಚಾರವಾಗಿ ಎದುರಾಗಿರುವ ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಂದ್ರ ಪರಿಸರ ಸಚಿವರಿಗೆ ಸ್ಪಷ್ಟನೆ ನೀಡಿದ್ದು, ಆಕ್ಷೇಪಗಳನ್ನು ನಿವಾರಣೆ ಮಾಡುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನವದೆಹಲಿಯಲ್ಲಿಂದು (ಮಂಗಳವಾರ ಜುಲೈ 8) ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಕೇಂದ್ರ ಸರ್ಕಾರದ ಇಬ್ಬರು ಸಚಿವರನ್ನು ಭೇಟಿ ಮಾಡಿದ್ದೇವೆ. ಕೇಂದ್ರ ಪರಿಸರ ಇಲಾಖೆ ಸಚಿವರಾದ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚೆ ಮಾಡಲಾಗಿದ್ದು, ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ಕೊಟ್ಟಿರುವ ವಿಚಾರವನ್ನು ಅವರಿಗೆ ವಿವರಿಸಿದ್ದೇವೆ. ಈ ಯೋಜನೆಯ ಸುಮಾರು 60-70% ಕಾಮಗಾರಿ ಮುಕ್ತಾಯಗೊಂಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆ ಕಾಮಗಾರಿಗೆ ಅಡ್ಡಿ ಎದುರಾಗಿದೆ. ಈ ವಿಚಾರವಾಗಿ ಕೇಂದ್ರ ಪರಿಸರ ಇಲಾಖೆ ಮಾಡಿರುವ ಆಕ್ಷೇಪಣೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ. ಇದು ಅತ್ಯುತ್ತಮ ಕುಡಿಯುವ ನೀರಿನ ಯೋಜನೆಯಾಗಿದ್ದು, ಅತ್ಯುನ್ನತ ತಂತ್ರಜ್ಞಾನದ ಹಾಗೂ ಏಷ್ಯಾದ ಅತಿ ದೊಡ್ಡ ಮೇಲ್ಗಾಲುವೆಯನ್ನು ನಿರ್ಮಾಣ ಮಾಡಲಾಗಿದೆ. ಈ ಕಾಮಗಾರಿಗೆ ರಾಷ್ಟ್ರಮಟ್ಟದ ಪ್ರಶಸ್ತಿಯೂ ಲಭಿಸಿದೆ ಎಂದು ವಿವರಿಸಿದರು.

ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ಯೋಜನೆ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಗೋವಾ ಅವರು ನಮ್ಮ ರಾಜ್ಯದ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕಾನೂನು ತಂಡದ ಜೊತೆ ಚರ್ಚೆ ಮಾಡಲಾಗಿದೆ. ವನ್ಯಜೀವಿ ಸಂರಕ್ಷಣೆ ವಿಚಾರದಲ್ಲಿ ಅವರು ಅವರ ರಾಜ್ಯದ ಬಗ್ಗೆ ಮಾತನಾಡಿಕೊಳ್ಳಲಿ. ನಮ್ಮ ರಾಜ್ಯದ ಬಗ್ಗೆ ಚರ್ಚೆ ಮಾಡುವ ಅಧಿಕಾರ ಅವರಿಗಿರುವುದಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಬಂದ ನಂತರ ನಾವು ಟೆಂಡರ್ ಕರೆಯಲಾಗಿದ್ದು, ಕೆಲಸ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ದಿಟ್ಟ ತೀರ್ಮಾನ ಮಾಡಬೇಕಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಈ ವಿಚಾರ ವಿವರಿಸಿ, ನಂತರ ನಾವು ಕಾನೂನು ಪ್ರಕಾರವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ: ಡಿಕೆಶಿ 

ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿನಂತೆ ಅಧಿಸೂಚನೆ ಹೊರಡಿಸುವ ಬಗ್ಗೆ ಜಲಶಕ್ತಿ ಸಚಿವರ ಜೊತೆ ಚರ್ಚಿಸಲಾಗಿದೆ. ಈ ಹಿಂದೆಯೇ ಈ ವಿಚಾರವಾಗಿ ಸಭೆ ನಡೆಯಲು ಸಮಯ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಗಿತ್ತು ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ: ಡಿಕೆಶಿ
Next: ಇಡಿ ಅಧಿಕಾರಿಗಳಿಗೆ ಆಸ್ತಿ ಲೆಕ್ಕ ಕೊಟ್ಟ ಡಿಕೆ ಸುರೇಶ್

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.