ಬೆಂಗಳೂರು: ಕಾಂಗ್ರೆಸ್ ನ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಹೇಳಿಕೊಂಡು ಐಶ್ವರ್ಯ ಗೌಡ ಎಂಬ ಮಹಿಳೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಈಗಾಗಲೇ ಬಂಧನಕ್ಕೆ ಒಳಪಟ್ಟಿದ್ದಾರೆ.
ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡ ಅಧಿಕಾರಿಗಳು ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಎರಡು ಬಾರಿ ವಿಚಾರಣೆಗೆ ಕರೆದಿದ್ದರು. ಇಡಿ ಅಧಿಕಾರಿಗಳು ವಿಚಾರಣೆಗೆ ಕರೆಯುತ್ತಿದ್ದಂತೆ ಡಿಕೆ ಸುರೇಶ್ ಅವರು ವಿಚಾರಣೆಗೆ ಹಾಜರಾಗಿ ತಮ್ಮ ಮೂಲ ಆಸ್ತಿಗಳ ದಾಖಲೆಗಳನ್ನು ಇಡಿ ಅಧಿಕಾರಿಗಳಿಗೆ ನೀಡಿದ್ದಾರೆ.
ಇನ್ನು ಡಿಕೆ ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಅವರು ವಂಚನೆ ಮಾಡಿರುವ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ
ಹೌದು, ಐಶ್ವರ್ಯ ಗೌಡ ಅವರು ಡಿಕೆ ಬ್ರದರ್ಸ್ ಎಂಬ ಸಿನಿಮಾ ಮಾಡುತ್ತೇನೆ ಎಂಬ ಕಾರಣಕ್ಕೆ ಕೋಟಿ ಕೋಟಿ ಹಣ ಪಿಕಿದ್ದಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಿಜೆಪಿ ಎಜೆಂಟ್ ಆಗಿ ಕೆಲಸ ಮಾಡಬೇಡಿ, ಕಾವಿ ಕಳಚಿ ರಾಜಕೀಯಕ್ಕೆ ಬನ್ನಿ
ಐಶ್ವರ್ಯ ಗೌಡ, ಎಸ್ಎಲ್ವಿ ಪ್ರೊಡಕ್ಷನ್ಸ್ ಅನ್ನೋ ಸಂಸ್ಥೆಯನ್ನ ನೊಂದಾಯಿಸಿ ಆ ಮೂಲಕ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದಳು ಎಂಬ ವಿಚಾರ ಬಯಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಲು ಫಿಲ್ಮ್ ಚೇಂಬರ್ಗೆ ಸಿಐಡಿ ಡಿವೈಎಸ್ಪಿ ಅಂಜುಮಾಲ ನಾಯಕ ಪತ್ರ ಬರೆದಿದ್ದಾರೆ.
ಇನ್ನು ಈ ವಿಚಾರವಾಗಿ ವಾಣಿಜ್ಯ ಮಂಡಳಿಯಿಂದಲೂ ಪ್ರತಿಕ್ರಿಯೆ ಸಿಕ್ಕಿದ್ದು, ಈ ಹೆಸರಿನಲ್ಲಿ ಯಾವ ಪ್ರೊಡಕ್ಷನ್ ರಿಜಿಸ್ಟರ್ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
