Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆ: ಡಿಕೆಶಿ
  • Front news
  • National
  • Politics
  • State

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆ: ಡಿಕೆಶಿ

admin July 9, 2025 1 minute read
Spread the love

ನವದೆಹಲಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನವದೆಹಲಿಯ ಕರ್ನಾಟಕ ಭನವದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ ₹ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ ₹2,666.70 ಕೋಟಿ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ ₹3000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ ₹1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ₹1,610 ಕೋಟಿ ಸೇರಿದಂತೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು ಎಂದರು. ಇದನ್ನೂ ಓದಿ: ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ: ಡಿಕೆಶಿ

ಆದರೆ ತದ ನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ. ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ಮಾಡಿಲ್ಲ. ಕೆಲವು ತಕರಾರುಗಳನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿತ್ತು ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದರು.

ಭದ್ರಾ ಮೇಲ್ದಂಡೆ ವಿಚಾರವಾಗಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಷ್ಕೃತ ಅಂದಾಜು ಪಟ್ಟಿ ಕೇಳಿದ್ದರು ಅದನ್ನು ಕೂಡ ಸಲ್ಲಿಸಿದ್ದೇವೆ. ಈ ಹಿಂದೆ ಹೇಳಿದ್ದ ₹5,300 ಕೋಟಿಗಿಂತಲೂ ಹೆಚ್ಚು ಅನುದಾನದ ಪರಿಷ್ಕೃತ ಪಟ್ಟಿ ಕಳುಹಿಸಿದ್ದೇವೆ. ಈಗಾಗಲೇ ₹10,604 ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದೇವೆ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ ಎಂದರು.

 

 

About the Author

admin

Administrator

Visit Website View All Posts

Spread the love

Post navigation

Previous: ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ: ಡಿಕೆಶಿ
Next: ರಕ್ಷಣಾ ಸಚಿವರ ಜೊತೆ ದಸರಾ ಉತ್ಸವದ ಬಗ್ಗೆ ಚರ್ಚೆ: ಸಿಎಂ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.