Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು: ಸಿಎಂ
  • Bangalore
  • Front news
  • Politics
  • State

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು: ಸಿಎಂ

admin July 12, 2025 1 minute read
Spread the love

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು. ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಘೋಷಿಸಲು ಹರ್ಷಿತನಾಗಿದ್ದೇನೆ ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಈ ಮಹಿಳಾ ಸಂಘಟನೆ ಸೇರಿದಂತೆ ಎಲ್ಲರಿಗೂ ಪ್ರೇರಣೆ ಆಯಿತು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣಕ್ಕೆ ಮೂಲ ಕಾರಣವೇನೆಂದು ತಿಳಿಸಿದ ನ್ಯಾ.ಡಿ ಕುನ್ಹಾ ಆಯೋಗ

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ, ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು.

ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು.

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಕಾಲ್ತುಳಿತ ಪ್ರಕರಣಕ್ಕೆ ಮೂಲ ಕಾರಣವೇನೆಂದು ತಿಳಿಸಿದ ನ್ಯಾ.ಡಿ ಕುನ್ಹಾ ಆಯೋಗ
Next: ಡಿಸಿಎಂ ಡಿಕೆ ಶಿವಕುಮಾರ್ ಅವರ ನೆಚ್ಚಿನ ನಟಿ ಯಾರು ಗೊತ್ತಾ..?

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.