ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಮಳೆಗೆ ಹಾನಿಯಾದ ಪ್ರದೇಶಗಳಿಗೆ ಇಂದು (ಸೋಮವಾರ ಜುಲೈ 14) ರಂದುಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೊಮ್ಮನಹಳ್ಳಿ ಸುತ್ತಮುತ್ತಲಲ್ಲಿ ಬರುವಂತಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, HSR ಲೇಔಟ್ 6ನೇ ಸೆಕ್ಟರ್ 12ನೇ ಮುಖ್ಯರಸ್ತೆಯು ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಹಾನಿಗೊಳಗಾಗುವ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಇಂಗ್ಲಿಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ
ಪರಿಶೀಲನೆ ನಂತರ ಮಾತನಾಡಿದ ಅವರು, ಈ ಪ್ರದೇಶದಲ್ಲಿ ಮಳೆಯ ಸಂದರ್ಬದಲ್ಲಿ ನೀರು ನಿಂತು ಈ ಕುರಿತು ಸ್ಥಳೀಯ ನಿವಾಸಿಗಳು ನನಗೆ ಮನವಿ ಸಲ್ಲಿಸಿದ್ದು ಇದಕ್ಕೆ ಶಾಶ್ವತ ಪರಿಹಾರ ಕೊಡಲು BBMP ಮತ್ತು BWSSB ಜಂಟಿಯಾಗಿ ಕಾಮಗಾರಿ ಕೈಗೊಂಡಿದ್ದು, ಒಳಚರಂಡಿ ವ್ಯವಸ್ಥೆಯ ಬಲವರ್ಧನೆ ಹಾಗೂ ಸ್ಟ್ರಾಮ್ ವಾಟರ್ ಡ್ರೇನ್ ಪುನರ್ ನಿರ್ಮಾಣ ಕಾರ್ಯಗಳು ಪ್ರಗತಿಯಲ್ಲಿವೆ ಎಂದರು.
