Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇಶದ 2ನೇ ಅತಿ ಉದ್ದದ ತೂಗು ಸೇತುವೆ ಲೋಕಾರ್ಪಣೆ 
  • Bangalore
  • Front news
  • Politics

ದೇಶದ 2ನೇ ಅತಿ ಉದ್ದದ ತೂಗು ಸೇತುವೆ ಲೋಕಾರ್ಪಣೆ 

admin July 14, 2025 1 minute read
Spread the love

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿರುವ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಲು ದಾರಿ ಇಲ್ಲದೆ ಎಲ್ಲಾ ಭಕ್ತಾದಿಗಳು ಲಾಂಚ್ ಗಳ ಮೂಲಕ ದೇವಿ ದರ್ಶನ ಪಡೆಯುತ್ತಿದ್ದರು.

ಇದೀಗ ಸಿಗಂದೂರು ಚೌಡೇಶ್ವರಿ ಭಕ್ತಾದಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ಸಿಗಂದೂರು ಚೌಡೇಶ್ವರಿ ಮೇಲು ಸೇತುವೆ ನಿರ್ಮಿಸಿ ಇಂದು (ಸೋಮವಾರ ಜುಲೈ 14) ರಂದು ಉದ್ಘಾಟನೆ ಮಾಡಲಾಯಿತು.

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರವನ್ನು ಇಂದು ರಾಷ್ಟ್ರಕ್ಕೆ ಅರ್ಪಣೆ ಮಾಡಲಾಯಿತು. ಮುಳುಗಡೆ ಸಂತ್ರಸ್ತರ 6 ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ನೀಡಲಾಯಿತು.

ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ 2ನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಿಸಲಾಗಿದೆ. ಇದನ್ನು ಇಂದು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೊತೆಗೂಡಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದನ್ನೂ ಓದಿ: ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ: ಸಿಎಂ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಸಂಸಂದ ಬಿ.ವೈ.ರಾಘವೇಂದ್ರ, ಸ್ಥಳೀಯ ನಾಯಕರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ನಿರಂತರ 6 ದಶಕಗಳ ಹಿನ್ನೀರಿನ ಪ್ರದೇಶದ ಬಂಧುಗಳ ಹೋರಾಟದ ಕೂಗನ್ನು ಆಲಿಸಿ ಕೇಂದ್ರ ಸರ್ಕಾರ ಸುಮಾರು 423 ಕೋಟಿ ಅನುದಾನ ಬಿಡುಗಡೆಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಕಲ್ಪದ ಫಲ ಮತ್ತು ನಿಮ್ಮೆಲ್ಲರ ನಿಸ್ವಾರ್ಥ ಪ್ರೀತಿಯ ಆಶೀರ್ವಾದ ಬಲದಿಂದ ಈ ಒಂದು ಐತಿಹಾಸಿಕ ಘಟನೆಗೆ ನಮ್ಮ ಮಲೆನಾಡು ಸಾಕ್ಷಿಯಾಗಿದೆ ಎಂದು ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

ಇದರೊಂದಿಗೆ ಕೇಂದ್ರ ಸರ್ಕಾರ ಅಧಿಕಾರ ನೀಡಿದ ಜನರ ಕೂಗಿಗೆ ತಕ್ಷಣವೇ ಸ್ಪಂದಿಸುವ ಮನೋಭಾವ ಇರುವ ಸರ್ಕಾರ ಎಂದು ಮತ್ತೊಮ್ಮೆ ದೇಶಕ್ಕೆ ಸಂದೇಶ ರವಾನಿಸಿದೆ. ಜೊತೆಗೆ ಶಂಕು ಸ್ಥಾಪನೆ ಮಾಡಿದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ತನ್ನ ಅಧಿಕಾರದ ಅವಧಿಯಲ್ಲಿ ಉದ್ಘಾಟನೆ ಮಾಡುವ ಸಂಪ್ರದಾಯ ಮುಂದುವರೆಸಿ ಇತಿಹಾಸ ನಿರ್ಮಿಸುತ್ತಿದೆ. ಈ ಒಂದು ಸೇತುವೆ ಕೇವಲ ಶರಾವತಿ ಹಿನ್ನೀರಿನ ಸಂತ್ರಸ್ತರ ಬವಣೆ ಮಾತ್ರ ನೀಗಿಸುವುದಲ್ಲದೆ ನಮ್ಮ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಇನ್ನಷ್ಟು ಬಾಂಧವ್ಯ ಬೆಸೆಯುವ ಕಾಲಘಟಕ್ಕೆ ಮುನ್ನುಡಿ ಬರೆಯುವುದು ನಿಶ್ಚಿತ. ಜೊತೆಗೆ ಎರಡು ಜಿಲ್ಲೆಗಳ ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ ಹಾಗೂ ವೈವಿಧ್ಯಮಯ ಸಂಸ್ಕøತಿಗಳ ಸಮ್ಮಿಲನ ಗಟ್ಟಿಯಾಗುವುದು ಹೊಸ ಶಖೆಯ ಆರಂಭಕ್ಕೆ ಸಾಕ್ಷಿಯಾಗಲಿದೆ ಎಂದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರ ಭೇಟಿ
Next: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಕಾರ್ಯಕ್ರಮ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.