ಗುಂಡಿಬಂಡೆ: ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆ ಯಿಂದಾಗಿ ರಾಜ್ಯದಲ್ಲಿ 5 ಕೋಟಿ ಜನ ಉಚಿತವಾಗಿ ಪ್ರಯಾಣ ಬೆಳೆಸಿರುವುದರಿಂದ ಇಂದು ರಾಜ್ಯದ ವಿವಿಧ ಕಡೆಗಳಲ್ಲಿ ಶಕ್ತಿ ಯೋಜನೆಯ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಇನ್ನು ಅದರಂತೆ ಇಂದು (ಸೋಮವಾರ ಜುಲೈ 14) ರಂದು ಗುಂಡಿಬಂಡೆಯಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಆದಿ ರೆಡ್ಡಿ ಮಾತನಾಡಿ, ಉಚಿತ ಪ್ರಯಾಣ ನೀಡಿದ ಕಾಂಗ್ರೆಸ್ ಸರ್ಕಾರ ನಮ್ಮದಾಗಿದೆ ನಮ್ಮ ಮುಖ್ಯಮಂತ್ರಿಗಳು ಶಕ್ತಿ ಯೋಜನೆಗೆ ಚಾಲನೆ ಮಾಡಿರುತ್ತಾರೆ ಆದರಿಂದ ಪ್ರತಿ ತಿಂಗಳು ಅತಿ ಹೆಚ್ಚು ಹೆಚ್ಚು ಮಹಿಳೆಯರು ಪ್ರಯಾಣ ಮಾಡುತ್ತಲೇ ಬಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ರಾದ ವಿಕಾಸ್, ಗುಡಿಬಂಡೆ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ರಾದ ಅಂಬರೀಶ್ ಪಟ್ಟಣ ಪಂಚಾಯತಿ ಸದಸ್ಯರಾದ ರಾಜೇಶ್, ಕೆ.ಟಿ ನಂಜುಡಪ್ಪ, ಬ್ಯಾಂಕ್ ಸುಬ್ಬರಾಯಪ್ಪ, ನಾಗರಾಜ್, ಶ್ರೀನಿವಾಸ್, ಮದು, ಸರ್ಕಾರಿ ಅಧಿಕಾರಿಗಳು ಹಾಜರಿದ್ದರು.
