ರಾಮನಗರ: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ (ಸೋಮವಾರ ಜುಲೈ 14) ರಂದು ನಿಧನರಾಗಿದ್ದು ಇಂದು (ಮಂಗಳವಾರ ಜುಲೈ 15) ರಂದು ಅವರ ಹುಟ್ಟುರಾದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಸಕಲ ಸರ್ಕಾರದ ಗೌರವದಿಂದ ಇಂದು ಅಂತ್ಯಕ್ರಿಯೆ ನೆರವೇರಿತು. ಅಲ್ಲದೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ಇದನ್ನೂ ಓದಿ: ಬಿ.ಸರೋಜಾದೇವಿ ಒಬ್ಬ ಮೇರು ನಟಿ: ಸಿಎಂ
ಇಂದು ಬೆಂಗಳೂರಿನಿಂದ ದಶವಾರ ಗ್ರಾಮಕ್ಕೆ ಸರೋಜಾದೇವಿ ಅವರ ಪಾರ್ಥಿವ ಶರೀರವನ್ನು ತರಲಾಗಿತ್ತು. ಬಳಿಕ ಗ್ರಾಮದಲ್ಲಿ ಹೂವಿನ ಪಲ್ಲಕ್ಕಿಯಲ್ಲಿ ಸರೋಜಾದೇವಿ ಅವರ ಪಾರ್ಥಿವ ಶರೀರವನ್ನು ಮೆರವಣಿ ಮೂಲಕ ತೋಟಕ್ಕೆ ತರಲಾಯಿತು. ಬಳಿಕ ಕುಟುಂಬಸ್ಥರು ಅಂತಿಮ ಸಂಸ್ಕಾರ ನೆರವೇರಿಸಿದರು. ಅವರ ತಾಯಿಯ ಸಮಾಧಿ ಪಕ್ಕವೇ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು.
