ಬೆಂಗಳೂರು: ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತ ಐವರನ್ನು ಬಂಧಿಸಿ ಪೋಲಿಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಶಿವಪ್ರಕಾಶ್ ಅವರ ತಾಯಿ ದೂರಿನ ಮೇರೆಗೆ ಈಗಾಗಲೇ ಐವರನ್ನು ಬಂಧಿಸಿ ತನಿಖೆಗೆ ಒಳಪಡಿಸಿರುವ ಪೊಲೀಸ್ ಅಧಿಕಾರಿಗಳು ಪ್ರಭಾವಿ ರಾಜಕೀಯ ವ್ಯಕ್ತಿಯಾದ ಬೈರತಿ ಬಸವರಾಜ್ ಅವರ ವಿರುದ್ಧವು ಕೂಡ ಈಗಾಗಲೇ ಈ ಕೇಸಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಶಿವಪ್ರಕಾಶ್ ಅವರ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತನಿಖಾಧಿಕಾರಿಗಳನ್ನು ನೇಮಕ ಮಾಡಿ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸ್ ಅಧಿಕಾರಿಗಳು, ಬಿಜೆಪಿಯ ಶಾಸಕ ಬೈರತಿ ಬಸವರಾಜ್ ಅವರು A5 ಆರೋಪಿ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕೆಜಿಎಫ್ ಬಾಬು ವಿರುದ್ಧ ಕೇಳಿ ಬಂತು ದೊಡ್ಡ ಆರೋಪ..!
ಇನ್ನು ಈ ಕೇಸ್ ನಲ್ಲಿ ಶಾಸಕ ಬೈರುತಿ ಬಸವರಾಜ್ ಅವರ ಹೆಸರು ತಳುಕು ಹಾಕಿಕೊಂಡಿರುವುದರಿಂದ ಅವರ ರಾಜಕೀಯ ಜೀವನಕ್ಕೆ ಬಹುದೊಡ್ಡ ಕಂಠಕವಾಗಿಲ್ಲಿದೆ. ಅಲ್ಲದೆ ಬಿಕ್ಲು ಶಿವ ಕೊ*ಲೆ ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕಿಕೊಂಡಿರುವುದು ಕೇವಲ ರಾಜಕೀಯ ಉದ್ದೇಶಕ್ಕಾಗಿ ಎಂದು ಬೈರತಿ ಬಸವರಾಜ್ ಹೇಳಿದ್ದಾರೆ.
ಅದೇನೇ ಆಗಲಿ ಬಿಕ್ಲು ಶಿವ ಕೊ*ಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರು ಬಂಧನ ಭೀತಿಯಲ್ಲಿ ಬದುಕುವಂಥ ಸ್ಥಿತಿ ನಿರ್ಮಾಣವಾಗಿದೆ.
ಹಾಗಾದ್ರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಪೋಲಿಸ್ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸುತ್ತಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ.
